3 ದಿನದ ಮುಖ್ಯಮಂತ್ರಿ ಶ್ರೀಯುತ ಯಡಿಯೂರಪ್ಪನವರ ಅಧಿಕಾರಾವಧಿ ಇಂದಿಗೆ ಕೊನೆಗೊಳ್ಳಲಿದೆ: ಸಿದ್ದರಾಮಯ್ಯ

12:40 PM, Saturday, May 19th, 2018
Share
1 Star2 Stars3 Stars4 Stars5 Stars
(No Ratings Yet)
Loading...

congressಬೆಂಗಳೂರು: ರಾಜ್ಯ ವಿಧಾನಸಭೆಯ ಕಲಾಪ ಆರಂಭವಾಗುತ್ತಿದ್ದಂತೆಯೇ ರಾಜಕಾರಣಿಗಳು ಮತ್ತು ಜನರ ಕುತೂಹಲ, ಉದ್ವೇಗ ಹೆಚ್ಚಾಗಿದೆ. ಆದರೆ, ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅವರ ಅಧಿಕಾರದ ಅವಧಿ ಇಂದೇ ಮುಕ್ತಾಯವಾಗಲಿದೆ. ಅವರು ಮೂರು ದಿನಗಳ ಮಟ್ಟಿಗಿನ ಮುಖ್ಯಮಂತ್ರಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಕಲಾಪ ಆರಂಭಕ್ಕೂ ಮುನ್ನ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಬಹುಮತವಿಲ್ಲದೆಯೇ ಸಂವಿಧಾನ ಬಾಹಿರವಾಗಿ ಪ್ರಮಾಣವಚನ ಸ್ವೀಕಾರ ಮಾಡಿರುವುದು ನಾಡಿನ ಮತದಾರರ ಆಶಯಗಳಿಗೆ ವಿರುದ್ಧವಾಗಿದೆ ಎಂದಿದ್ದಾರೆ. ಇಂದು ಸಂಜೆ ಜನಾಭಿಪ್ರಾಯಕ್ಕೆ ಜಯ ದೊರೆಯಲಿದೆ ಎಂಬ ವಿಶ್ವಾಸವಿರುವುದಾಗಿ ಹೇಳಿಕೊಂಡಿದ್ದಾರೆ.

ಸಂಜೆ 4 ಗಂಟೆಗೆ ಏನೆಲ್ಲಾ ಬೆಳವಣಿಗೆಗಳು ನಡೆಯಲಿವೆ ಎಂಬ ಲೆಕ್ಕಾಚಾರಗಳು ನಡೆಯುತ್ತಿವೆ. ಯಡಿಯೂರಪ್ಪ ಅವರು ತಮಗೆ ಬಹುಮತ ಇರುವುದನ್ನು ಸಾಬೀತುಪಡಿಸಿಕೊಳ್ಳುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯು ತನಗೆ ಅಗತ್ಯವಿರುವಷ್ಟು ಮತಗಳನ್ನು ಪಡೆದುಕೊಳ್ಳಲು ತಮ್ಮ ಶಾಸಕರನ್ನು ಸೆಳೆಯಲಿವೆ ಎಂಬ ಭಯದಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಅವರು ಅತ್ತಿತ್ತ ಸುಳಿಯದಂತೆ ತಡೆಯಲು ಹರಸಾಹಸಪಡುತ್ತಿವೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English