ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಬಜ್ಪೆಯ ಕೆಂಜಾರಿನಲ್ಲಿ ಸಂಭವಿಸಿದ್ದ ವಿಮಾನ ದುರಂತದ ಕಹಿ ಘಟನೆಗೆ ಇಂದಿಗೆ 8 ವರ್ಷ. ಅಂತೆಯೇ ದುರಂತದಲ್ಲಿ ಮಡಿದವರಿಗೆ ಇಂದು ಮಂಗಳೂರಿನ ಕೂಳೂರು ಸೇತುವೆ ಪಕ್ಕದ ಉದ್ಯಾನವನದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ದ.ಕ. ಜಿಲ್ಲಾಡಳಿತ, ನವಮಂಗಳೂರು ಬಂದರು ಮಂಡಳಿ, ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು.
ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಅಪರ ಜಿಲ್ಲಾಧಿಕಾರಿ ವೈಶಾಲಿ, ದ.ಕ. ಜಿಪಂ ಸಿಇಒ ಡಾ. ಎಂ.ಆರ್.ರವಿ, ಮಂಗಳೂರು ಸಹಾಯಕ ಆಯುಕ್ತ ಮಹೇಶ್ ಕರ್ಜಗಿ, ದ.ಕ. ಜಿಲ್ಲಾ ಗೃಹರಕ್ಷಕ ದಳದ ಅಧೀಕ್ಷಕ ಮುರಳಿ ಮೋಹನ್ ಚೂಂತಾರ್, ಡಿಸಿಪಿ ಉಮಾ ಪ್ರಶಾಂತ್, ಮನಪಾ ಆಯುಕ್ತ ಮುಹಮ್ಮದ್ ನಝೀರ್, ಎನ್ಎಂಪಿಟಿ ಅಧ್ಯಕ್ಷ ಸುರೇಶ್ ಪಿ.ಶಿರ್ವಾಡ್ಕರ್, ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರದ ಪ್ರಭಾರ ನಿರ್ದೇಶಕ ಅಬ್ರಹಾಂ ಕೊಶಿ, ಮೀರಾ ಕುಸೂರ್ ಹಗೂ ಮಂಗಳೂರು ವಿಮಾನ ದುರಂತ ಸಂತ್ರಸ್ತ ಕುಟುಂಬಗಳ ಸಮಿತಿಯ ಅಧ್ಯಕ್ಷ ಮುಹಮ್ಮದ್ ಬ್ಯಾರಿ ಎಡಪದವು ಮತ್ತಿತರರು ಶ್ರದ್ಧಾಂಜಲಿ ಸಲ್ಲಿಸಿದರು.
ವಿಮಾನ ದುರಂತದಲ್ಲಿ 150 ಪ್ರಯಾಣಿಕರು ಮೃತಪಟ್ಟಿದ್ದರು. ಈ ದುರಂತ ದೇಶವನ್ನೇ ಬೆಚ್ಚಿಬೀಳಿಸಿತ್ತು.
Click this button or press Ctrl+G to toggle between Kannada and English