ಮಂಗಳೂರು: ಇಂದು ಮುಖ್ಯಮಂತ್ರಿಯಾಗಿ ಹೆಚ್.ಡಿ.ಕುಮಾರಸ್ವಾಮಿ ಪ್ರಮಾಣವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ಇಂದಿನಿಂದ ಎರಡು ದಿನ ಮಂಗಳೂರು ನಗರದಲ್ಲಿ ಕಲಂ 35 ರ ಅನ್ವಯ ನಿರ್ಬಂಧ ಆಜ್ಞೆಯನ್ನು ಹೊರಡಿಸಲಾಗಿದೆ.
ಮಂಗಳೂರು ಪೊಲೀಸ್ ಕಮೀಷನರ್ ವಿಪುಲ್ ಕುಮಾರ್ ನಿರ್ಬಂಧ ಆಜ್ಞೆಯನ್ನು ಹೊರಡಿಸಿದ್ದಾರೆ.
ಇಂದು ಮಧ್ಯಾಹ್ನ 2 ಗಂಟೆಯಿಂದ ನಾಳೆ ಸಂಜೆ 6 ಗಂಟೆವರೆಗೆ ಈ ನಿರ್ಬಂಧ ಆಜ್ಞೆ ಜಾರಿಯಲ್ಲಿರುತ್ತದೆ. ಈ ಸಂದರ್ಭದಲ್ಲಿ ವಿಜಯೋತ್ಸವ, ರಾಜಕೀಯ ಸಭೆ ಸಮಾರಂಭಗಳ ಮೇಲೆ ನಿಷೇಧ ಹೇರಲಾಗಿದೆ.
Click this button or press Ctrl+G to toggle between Kannada and English