ನೂತನ ಶಾಸಕರಾಗಿ ಆಯ್ಕೆಯಾದ ರಾಜೇಶ್ ನಾಯ್ಕ್ ಸರಪಾಡಿ ಕ್ಷೇತ್ರಕ್ಕೆ ಭೇಟಿ.

3:37 PM, Wednesday, May 23rd, 2018
Share
1 Star2 Stars3 Stars4 Stars5 Stars
(No Ratings Yet)
Loading...

rajesh-bantwalಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ನೂತನ ಶಾಸಕರಾಗಿ ಆಯ್ಕೆಯಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಸರಪಾಡಿ ಶರಬೇಶ್ವರ ದೇವಸ್ಥಾನಕ್ಕೆ ಭೇಟಿ ಮಾಡಿ ವಿಶೇಷ ಪೂಜೆಯನ್ನು ಸಲ್ಲಿಸಿದರು.

ಈ ಸಂಧರ್ಭದಲ್ಲಿ ಮಾತನಾಡಿದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಇದು ಕಾರ್ಯಕರ್ತರ ಗೆಲುವು ಈ ಹಿಂದೆ ಅಭಿವೃದ್ದಿ ಮರಿಚಿಕೆಯಾಗಿದ್ದ ಸರಪಾಡಿ,ಮಣಿನಾಲ್ಕೂರು ಪ್ರದೇಶಕ್ಕೆ ಮುಂದಿನ ದಿನಗಳಲ್ಲಿ ಪ್ರಥಮ ಆದ್ಯತೆ ನೀಡುತ್ತೆನೆಂದು ಹೇಳಿದರು.

ಹರಿಕೃಷ್ಣ ಬಂಟ್ವಾಳ ಮಾತಾಡಿ ಅಭಿವೃದ್ದಿ ಪರ ಚಿಂತನೆಯುಳ್ಳ ರಾಜೇಶ್ ನಾಯ್ಕ್ ಇವರು ಜನಸಾಮಾನ್ಯರ ಕಷ್ಟ-ಸುಖವನ್ನು ಕ್ಷೇತ್ರದಲ್ಲಿ 2 ಬಾರಿ ಪಾದಯಾತ್ರೆ ಮಾಡುವ ಮೂಲಕ ಅರಿತಿದ್ದಾರೆ. ಅವರಿಂದ ಬಂಟ್ವಾಳ ಕ್ಷೇತ್ರದ ಮಾದರಿ ಕ್ಷೇತ್ರವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಬಂಟ್ವಾಳ ಕ್ಷೇತ್ರದ ಬಿಜೆಪಿ ಅಧ್ಯಕ್ಷ ದೇವದಾಸ್ ಶೆಟ್ಟಿ ಮಾತನಾಡಿ, ಬಂಟ್ವಾಳ ಕ್ಷೇತ್ರದ ಪ್ರತಿ ಕಾರ್ಯಕರ್ತರಲ್ಲಿ ನಿರಂತರ 5 ವರ್ಷಗಳಿಂದ ಸಂಪರ್ಕದಲ್ಲಿದ್ದು ಜನರ ಕಷ್ಟ-ಸುಖಗಳಿಗೆ ಸ್ಪಂದಿಸಿ ಹಾಗೂ ಕಾರ್ಯಕರ್ತರ ಪರಿಶ್ರಮದಿಂದ ಪಡೆದ ಗೆಲುವು ಎಂದು ಬಣ್ಣಿಸಿದರು.

ಬಂಟ್ವಾಳ ಬಿಜೆಪಿ ಪ್ರಧಾನಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಕ್ಷೇತ್ರ ಉಪಾಧ್ಯಕ್ಷರಾದ ನಾರಾಯಣ ಪೂಜಾರಿ ಬೊಳ್ಳುಕಲ್ಲು, ಕ್ಷೇತ್ರ ಕಾರ್ಯದರ್ಶಿ ರಂಜಿತ್ ಮೈರ, ಸರಪಾಡಿ ಮಹಾಶಕ್ತಿಕೇಂದ್ರದ ಅಧ್ಯಕ್ಷ ಶಶಿಕಾಂತ್ ಶೆಟ್ಟಿ, ಸರಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲೀಲಾವತಿ, ಧರ್ಣಪ್ಪ ಪೂಜಾರಿ, ಉಪಾಧ್ಯಕ್ಷರಾದ ದಯಾನಂದ ಶೆಟ್ಟಿ ಮುನ್ನಲಾಯಿ, ಮಣಿನಾಲ್ಕೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ದಿನೇಶ್ ನಾಯ್ಕ, ಉಪಸ್ಥಿತರಿದ್ದರು. ಗ್ರಾಮಪಂಚಾಯತ್ ಸದಸ್ಯರಾದ ದಯಾನಂದ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು. ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿ ಸುದರ್ಶನ್ ಬಜ ವಂದಿಸಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಪ್ರಧಾನಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಕ್ಷೇತ್ರ ಉಪಾಧ್ಯಕ್ಷರಾದ ನಾರಾಯಣ ಪೂಜಾರಿ ಬೊಳ್ಳುಕಲ್ಲು, ಕ್ಷೇತ್ರ ಕಾರ್ಯದರ್ಶಿ ರಂಜಿತ್ ಮೈರ, ಸರಪಾಡಿ ಮಹಾಶಕ್ತಿಕೇಂದ್ರದ ಅಧ್ಯಕ್ಷ ಶಶಿಕಾಂತ್ ಶೆಟ್ಟಿ, ಸರಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲೀಲಾವತಿ, ಧರ್ಣಪ್ಪ ಪೂಜಾರಿ, ಉಪಾಧ್ಯಕ್ಷರಾದ ದಯಾನಂದ ಶೆಟ್ಟಿ ಮುನ್ನಲಾಯಿ, ಮಣಿನಾಲ್ಕೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ದಿನೇಶ್ ನಾಯ್ಕ, ಉಪಸ್ಥಿತರಿದ್ದರು. ಗ್ರಾಮಪಂಚಾಯತ್ ಸದಸ್ಯರಾದ ದಯಾನಂದ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿರು. ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿ ಸುದರ್ಶನ್ ಬಜ ವಂದಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English