ಬೆಂಗಳೂರು: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಮೂರನೇ ಪುತ್ರ, ಎಚ್ ಡಿ ಕುಮಾರಸ್ವಾಮಿ (58) ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಮೇ 23ರಂದು 4.32 ನಿಮಿಷದ ಸುಮಾರಿಗೆ ದೇವರು ಹಾಗೂ ಕನ್ನಡ ನಾಡಿನ ಜನರೆ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಈ ಮೂಲಕ ವಿಧಾನಸೌಧದ ಮುಂಭಾಗದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯ ನೂತನ ಸರ್ಕಾರದ ಪದಗ್ರಹಣವಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಾಳಯದಲ್ಲಿ ಸಂಭ್ರಮಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಕಂಡು ಬಂದಿತ್ತು. ಮಳೆಯ ಕಣ್ಣಾಮುಚ್ಚಾಲೆಯ ನಡುವೆ ಕಿವಿಗಡಕಿಚ್ಚಿನ ಶಬ್ದ, ಜಯಘೋಷಗಳ ನಡುವೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು.
ರಾಜ್ಯಪಾಲ ವಜುಭಾಯಿವಾಲ ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಸೋನಿಯಾಗಾಂಧಿ, ರಾಹುಲ್ ಗಾಧಿ, ಮಾಯಾವತಿ, ಶರದ್ ಪವಾರ್, ಅಖಿಲೇಶ್ ಯಾದವ್, ಕೇರಳ ಸಿಎಂ ಪಿಣರಾಯಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English