ಮಾತು ತಪ್ಪಿದರೆ ಕುಮಾರಸ್ವಾಮಿಗೆ ತಕ್ಕ ಪಾಠ: ರೈತ ಸಂಘ ಎಚ್ಚರಿಕೆ

5:15 PM, Wednesday, May 23rd, 2018
Share
1 Star2 Stars3 Stars4 Stars5 Stars
(No Ratings Yet)
Loading...

formersಮೈಸೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಹೆಚ್‌‌. ಡಿ. ಕುಮಾರಸ್ವಾಮಿ, ಮಾತು ತಪ್ಪದೇ ರೈತರ ಸಾಲ ಮನ್ನಾ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹಿಸಿವೆ.

ನ್ಯಾಯಾಲಯದ ಮುಂಭಾಗವಿರುವ ಪಾರ್ಕ್‌ ಆವರಣದಲ್ಲಿ ಪ್ರತಿಭಟನೆ ನಡೆಸಿದ ಕೃಷಿಕರು, ಜೆಡಿಎಸ್ ಪಕ್ಷಕ್ಕೆ ಮತದಾರರು ಬಹುಮತ ನೀಡದೇ ಇರಬಹುದು. ಆದರೆ, ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡವರು ರಾಜ್ಯದ ರೈತರ ಹಿತದೃಷ್ಟಿಯಿಂದ ಸಾಲ ಮನ್ನಾಕ್ಕೆ ಎಲ್ಲ ಸಹಕಾರ ನೀಡುತ್ತಾರೆ. ಎಲ್ಲರ ಸಹಕಾರ ಪಡೆದು ರೈತರ ಸಾಲ ಮಾಡಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಜೊತೆ ಕೈಜೋಡಿಸಿ ಮಾತು ತಪ್ಪಿದಾಗ, ರಾಜ್ಯದ ಜನತೆ ಏನು ಪಾಠ ಕಲಿಸಿದ್ದಾರೆ. ಈಗ ರೈತರ ಸಾಲ ಮನ್ನಾ ಮಾಡುತ್ತೇನೆ ಎಂದು ಈಗ ಉಲ್ಟಾ ಹೊಡೆದರೆ, ಮಾತು ತಪ್ಪಿದ ಕುಮಾರಸ್ವಾಮಿ ಅವರಿಗೆ ತಕ್ಕ ಪಾಠ ಕಲಿಸುವುದು ರೈತರಿಗೆ ಗೊತ್ತಿದೆ ಎಂದು ಎಚ್ಚರಿಕೆ ನೀಡಿದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English