ಬಿಜೆಪಿ ನಾಯಕರು ಟೀಕಿಸುವುದರಲ್ಲೇ ಕಾಲ ಕಳೆಯುತ್ತಿದ್ದಾರೆ: ಕುಮಾರಸ್ವಾಮಿ

5:12 PM, Thursday, May 24th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

janatha-dalಬೆಂಗಳೂರು: ಬುಧವಾರ ರಾಜ್ಯದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿರುವ ಎಚ್.ಡಿ. ಕುಮಾರಸ್ವಾಮಿ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದು, ಬಿಜೆಪಿ ನಾಯಕರು ನಮ್ಮನ್ನು ಟೀಕಿಸುವುದರಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದು ಕಿಡಿ ಕಾರಿದರು.

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಗುರುವಾರ ಬೆಳಗ್ಗೆ ಬೆಂಗಳೂರಿನಲ್ಲಿ ಪಟ್ಟನಾಯಕನಹಳ್ಳಿ ನಂಜಾವಧೂತ ಸ್ವಾಮೀಜಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಬೆಂಗಳೂರಿನಲ್ಲಿ ಇಂದು ಮಾತನಾಡಿದ ಕುಮಾರಸ್ವಾಮಿ, ಬಿಜೆಪಿ ನಾಯಕರು ನಮ್ಮ ಮೇಲೆ ಟೀಕೆ ಮಾಡುವುದನ್ನ ಬಿಡಬೇಕು ಅದರಲ್ಲೇ ಕಾಲ ಕಳೆಯಬಾರದು ಎಂದು ಟಾಂಗ್ ನೀಡಿದರು.

ಇನ್ನು ಸಾಲ ಮನ್ನಾ ಬಗ್ಗೆ ಕಾಂಗ್ರೆಸ್ ನಾಯಕರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇನೆ. ಈ ಬಗ್ಗೆ ಅನುಮಾನ ಬೇಡ ಎಂದ ಕುಮಾರ ಸ್ವಾಮಿ, ಪ್ರತಿಜ್ಞಾ ವಿಧಿ ಕಾರ್ಯಕ್ರಮದ ವೇಳೆ ಉಂಟಾದ ಭದ್ರತಾ ಲೋಪದ ಬಗ್ಗೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದೇನೆ ಎಂದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English