ಬಹುಮತ ಸಾಬೀತಿಗೆ ಯಾವುದೇ ಭಯ ಇಲ್ಲ: ಸಿಎಂ ಹೆಚ್.ಡಿ.ಕುಮಾರಸ್ವಾಮಿ

10:40 AM, Friday, May 25th, 2018
Share
1 Star2 Stars3 Stars4 Stars5 Stars
(No Ratings Yet)
Loading...

kumarswamyಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಬಹುಮತ ಸಾಬೀತು ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ತಂದೆ ದೇವೇಗೌಡರನ್ನು ಭೇಟಿ ಮಾಡಿ ಚರ್ಚಿಸಿದರು.

ಪದ್ಮನಾಭನಗರದಲ್ಲಿರುವ ಗೌಡರ ನಿವಾಸ ಅಮೋಘಕ್ಕೆ ಆಗಮಿಸಿದ ಹೆಚ್‌ಡಿಕೆ, ಬಹುಮತ ಸಾಬೀತುಪಡಿಸುವ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು. ಈ ವೇಳೆ ದೇವೇಗೌಡರು ಹಲವು ಮಹತ್ವದ ಸಲಹೆಗಳನ್ನು ಕುಮಾರಸ್ವಾಮಿ ಅವರಿಗೆ ನೀಡಿದ್ದಾರೆ ಎನ್ನಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ, ಬಹುಮತ ಸಾಬೀತಿಗೆ ಯಾವುದೇ ಭಯ ಇಲ್ಲ ಎಂದು ಹೇಳಿದರು. ನಂತರ ಸಿಎಂ ಗೃಹ ಕಚೇರಿ ಕೃಷ್ಣಾಗೆ ತೆರಳಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English