- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಜೂನ್ 1 ರಿಂದ ಜುಲೈ 31 ರವರೆಗೆ ಮೀನುಗಾರಿಕೆಗೆ ಕಡ್ಡಾಯ ನಿಷೇಧ..!

coastal-wood [1]ಕರಾವಳಿಯ ಪ್ರಮುಖ ವಾಣಿಜ್ಯ ವಹಿವಾಟದ ಮೀನುಗಾರಿಕೆಗೆ ಈ ಅವಧಿಯಲ್ಲಿ ಪ್ರತಿ ಬಾರಿ ಕಡ್ಡಾಯ ರಜೆ ನೀಡಲಾಗುತ್ತದೆ. ಅದರಂತೆ ಆಳ ಸಮುದ್ರ ಮೀನುಗಾರಿಕೆಯನ್ನು ನೀಷೇಧಿಸಿ ಸರ್ಕಾರ ಆದೇಶ ನೀಡಿದೆ.

ಪ್ರತಿ ಬಾರಿ ಈ ಅವಧಿಯಲ್ಲಿ ಮೀನುಗಾರಿಕೆಗೆ ನಿಷೇಧವನ್ನು ಹೇರಲು ಮುಖ್ಯ ಕಾರಣ ಈ ಅವಧಿಯಲ್ಲಿ ಮೀನುಗಳ ಸಂತಾನೋತ್ಪತ್ತಿ. ಜೂನ್‌ ತಿಂಗಳು ಮಳೆ ಆರಂಭವಾದೊಡನೆ ಸಮುದ್ರದಲ್ಲಿ ಮೀನುಗಳು ಸಂತಾನೋತ್ಪತ್ತಿಯಲ್ಲಿ ತೊಡಗುತ್ತವೆ. ಮೀನುಗಳು ಮೊಟ್ಟೆ ಇಡುವ ಸಂದರ್ಭ ಇದಾಗಿದ್ದರಿಂದ ಮೀನುಗಳ ಬೇಟೆಯಾಡುವುದರಿಂದ ಅವುಗಳ ಸಂತತಿ ನಶಿಸಲು ಕಾರಣವಾಗುತ್ತದೆ.

ಈ ಕಾರಣಕ್ಕಾಗಿ ಮೀನುಗಾರಿಕೆಯನ್ನು ಮಾಡದಂತೆ ಸರ್ಕಾರ ಎಚ್ಚರ ವಹಿಸುತ್ತದೆ. ಮೀನುಗಳು ಮೊಟ್ಟೆ ಇಡುವ ಸಂದರ್ಭದಲ್ಲಿ ಮೀನುಗಳನ್ನು ಹಿಡಿಯುವುದರಿಂದ ಮುಂದೆ ಮೀನುಗಳು ಸಿಗಲು ಸಮಸ್ಯೆಯಾಗುತ್ತದೆ. ಈ ಕಾರಣಕ್ಕಾಗಿ ಸರ್ಕಾರ ಕಾನೂನು ರೂಪದಲ್ಲಿ ಮೀನುಗಾರಿಕೆಯಲ್ಲಿ ತೊಡಗದಂತೆ ತಿಳಿಸಿದೆ.

ಜೂನ್‌ ತಿಂಗಳಲ್ಲಿ ಮಳೆ ಆರಂಭವಾದೊಡನೆ ಸಮುದ್ರ ಸಹ ರೌದ್ರಾವತಾರ ತಾಳುತ್ತದೆ. ಸಮುದ್ರದಲ್ಲಿ ಅಲೆಗಳ ಆರ್ಭಟವು ಹೆಚ್ಚಾಗಿರುತ್ತದೆ. ಈ ವೇಳೆ ಸಮುದ್ರದಲ್ಲಿ ಬಿರುಗಾಳಿಯು ಹೆಚ್ಚು. ಈ ಸಂದರ್ಭದಲ್ಲಿ ಮೀನುಗಾರಿಕೆಗೆ ತೆರಳಿದರೆ ಅಪಾಯವು ಸಹ ಕಟ್ಟಿಟ್ಟ ಬುತ್ತಿ. ಸಮುದ್ರದ ಅಬ್ಬರಕ್ಕೆ ಮೀನುಗಾರಿಕೆಗೆ ತೆರಳುವ ಬೋಟ್‌‌ಗಳು ಅಪಾಯಕ್ಕೆ ಸಿಲುಕಿಕೊಂಡು ಪ್ರಾಣಾಪಾಯವಾಗುವ ಸಾಧ್ಯತೆಯೂ ಹೆಚ್ಚು. ಈ ಕಾರಣಕ್ಕಾಗಿ ಈ ಅವಧಿಯಲ್ಲಿ ಆಳ ಸಮುದ್ರ ಮೀನುಗಾರಿಕೆಯನ್ನು ಸರ್ಕಾರ ನೀಷೇಧಿಸಿರುತ್ತದೆ.