ಬೆಂಗಳೂರು: ಕುಮಾರಸ್ವಾಮಿ ನೇತೃತ್ವದ ರಾಜ್ಯ ಸರ್ಕಾರ ರೈತರ ಸಾಲಮನ್ನಾ ಮಾಡದೇ ಇರುವ ಹಿನ್ನೆಲೆಯಲ್ಲಿ ಕರೆ ನೀಡಿರುವ ಸ್ವಯಂಘೋಷಿತ ಬಂದ್ ನ್ನು ಯಶಸ್ವಿಗೊಳಿಸಬೇಕು ಎಂದು ಪಕ್ಷದ ಶಾಸಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಖಡಕ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ತನ್ನ ಪಕ್ಷದ ಎಲ್ಲಾ ಶಾಸಕರಿಗೆ ಸೂಚನೆ ರವಾನಿಸಿರುವ ಬಿಎಸ್ವೈ, ರಾಜ್ಯದ ಪ್ರತೀ ಜಿಲ್ಲೆ, ಪ್ರತೀ ತಾಲೂಕುಗಳಲ್ಲಿ ಬಂದ್ ಆಗಬೇಕು. ನಮಗೆ ಅಧಿಕಾರ ಇಲ್ಲದೇ ಹೋದರೂ ಪರವಾಗಿಲ್ಲ. ರೈತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು. ರೈತರಿಗೆ ಸೂಕ್ತ ನ್ಯಾಯ ದೊರಕಬೇಕು. ಹೀಗಾಗಿ ಬಂದ್ ಯಶಸ್ವಿಯಾಗಬೇಕು.
ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಬಂದ್ ಯಶಸ್ವಿಗೊಳಿಸಿ ಎಂದು ಪಕ್ಷದ ಎಲ್ಲಾ ಶಾಸಕರಿಗೆ ಬಿಎಸ್ವೈ ತಾಕೀತು ಮಾಡಿದ್ದಾರೆ ಎಂದು ತಿಳಿದುಬಂದಿದೆ.
Click this button or press Ctrl+G to toggle between Kannada and English