ಬೆಂಗಳೂರು: ನಾನೇನು ಸನ್ಯಾಸಿಯಲ್ಲ. ನಾನು ಸಹ ಸಚಿವ ಸ್ಥಾನದ ಆಕಾಂಕ್ಷಿ ಎಂದು ಜೆಡಿಎಸ್ ಶಾಸಕ ಸಿ.ಎಸ್.ಪುಟ್ಟರಾಜು ತಮ್ಮ ಸಚಿವ ಸ್ಥಾನದ ಇಂಗಿತ ವ್ಯಕ್ತಪಡಿಸಿದ್ದಾರೆ.
ಇಂದು ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪರೋಕ್ಷವಾಗಿ ತಾನು ಸಚಿವ ಸ್ಥಾನದ ಆಕಾಂಕ್ಷಿ ಎಂದು ಒಪ್ಪಿಕೊಂಡಿದ್ದಾರೆ. ಆದರೆ ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದು ಹೇಳಿದರು.
ಇದೇ ವೇಳೆ ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ ಅವರು, ಬಿಜೆಪಿಯವರಿಗೆ ಹೆದರಿ ನಾವು ಸಾಲಮನ್ನಾ ಬಗ್ಗೆ ತೀರ್ಮಾನ ಮಾಡುತ್ತಿಲ್ಲ. ರೈತರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದ್ದೇವೆ ಎಂದರು.
Click this button or press Ctrl+G to toggle between Kannada and English