ಉಡುಪಿ: ಉಡುಪಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್, ಜಿಲ್ಲಾ ಮೊಗವೀರ ಯುವ ಸಂಘಟನೆಯ ವತಿಯಿಂದ ಜಿಲ್ಲೆಯ ಎಲ್ಲ ಸಮಾಜದ 5100 ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಉಚಿತ ನೋಟು ಪುಸ್ತಕ ವಿತರಣಾ ಸಮಾರಂಭವನ್ನು ಶನಿವಾರ ಅಂಬಲಪಾಡಿ ಶ್ಯಾಮಿಲಿ ಸಭಾಂಗಣ ದಲ್ಲಿ ಆಯೋಜಿಸಲಾಗಿತ್ತು.
ಸಮಾರಂಭವನ್ನು ಉದ್ಘಾಟಿಸಿದ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಅಧ್ಯಕ್ಷ ಡಾ. ಜಿ.ಶಂಕರ್ ಮಾತನಾಡಿ, ಕಳೆದ 15 ವರ್ಷಗಳಿಂದ ಲಕ್ಷಾಂತರ ಮಂದಿ ವಿದ್ಯಾರ್ಥಿಗಳಿಗೆ ಉಚಿತ ನೋಟು ಪುಸ್ತಕಗಳನ್ನು ವಿತರಿಸಲಾಗಿದೆ. ಇಂದು ಉಡುಪಿ ಮತ್ತು ಕುಂದಾಪುರ, ನಾಳೆ ಶಿವಮೊಗ್ಗದಲ್ಲಿ ಒಟ್ಟು 8000 ವಿದ್ಯಾರ್ಥಿ ಗಳಿಗೆ ನೋಟು ಪುಸ್ತಕಗಳನ್ನು ವಿತರಿಸಲಾಗುತ್ತಿದೆ. ಸಮಾಜದ ಆಶೀರ್ವಾದ ಇರುವರೆಗೆ ನಾವು ಸಮಾಜ ಸೇವೆಯನ್ನು ಮುಂದುವರೆಸುತ್ತೇವೆ ಎಂದು ತಿಳಿಸಿದರು.
ಇಂದಿನ ಸಮಾಜದಲ್ಲಿ ಶಿಕ್ಷಣ ಎಂಬುದು ಅತಿ ಮುಖ್ಯ. ಶಿಕ್ಷಣ ಇಲ್ಲದೆ ಸಮಾಜದಲ್ಲಿ ಬದುಕಲು ಸಾಧ್ಯವಿಲ್ಲ. ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿ ಯಾಗದೆ ಉತ್ತಮ ಶಿಕ್ಷಣ ಪಡೆಯಬೇಕು. ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಮಾರ್ಗದರ್ಶನ ಹಾಗೂ ಸಂಸ್ಕಾರ ನೀಡಬೇಕು ಎಂದು ಅವರು ಹೇಳಿದರು.
ಶಾಲಿನಿ ಶಂಕರ್ ಸಾಂಕೇತಿಕವಾಗಿ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿ ದರು. ಅಧ್ಯಕ್ಷತೆಯನ್ನು ಜಿಲ್ಲಾ ಮೊಗವೀರ ಯುವ ಸಂಘಟನೆಯ ಅಧ್ಯಕ್ಷ ವಿನಯ್ ಕರ್ಕೇರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಟ್ರಸ್ಟಿ ನವೀನ್, ಜಿಲ್ಲಾ ಮೊಗವೀರ ಯುವ ಸಂಘಟನೆಯ ನಿಕಟ ಪೂರ್ವ ಅಧ್ಯಕ್ಷ ಗಣೇಶ್ ಕಾಂಚನ್ ಉಪಸ್ಥಿತರಿದ್ದರು. ಆನಂದ್ ಎಸ್.ಕೆ. ಸ್ವಾಗತಿಸಿದರು. ಚಂದ್ರೇಶ್ ಪಿತ್ರೋಡಿ ಕಾರ್ಯಕ್ರಮ ನಿರೂಪಿಸಿದರು.
Click this button or press Ctrl+G to toggle between Kannada and English