ರಾಜರಾಜೇಶ್ವರಿ ನಗರ ಮತ ಎಣಿಕೆ, ಕೈ ಅಭ್ಯರ್ಥಿ ಮುನಿರತ್ನ ಮುನ್ನಡೆ..!

9:42 AM, Thursday, May 31st, 2018
Share
1 Star2 Stars3 Stars4 Stars5 Stars
(5 rating, 1 votes)
Loading...

muniratnaಬೆಂಗಳೂರು: ರಾಜರಾಜೇಶ್ವರಿ ನಗರದ ವಿಧಾನಸಭೆಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಈಗಾಗಲೇ ಆರಂಭವಾಗಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಮುನಿರತ್ನ ಮುನ್ನಡೆ ಸಾಧಿಸಿದ್ದಾರೆ.

ಮೊದಲ ಸುತ್ತಿನಲ್ಲಿ 9342 ಮತಗಳನ್ನು ಪಡೆದ ಮುನಿರತ್ನ ಗೆಲುವಿನತ್ತ ಮುನ್ನುಗುತ್ತಿದ್ದು, ಬಿಜೆಪಿ ಅಭ್ಯರ್ಥಿ ಮೊದಲ ಸುತ್ತಿನಲ್ಲಿ 5220 ಮತಗಳನ್ನು ಪಡೆಯುವ ಮೂಲಕ 2ನೇ ಸ್ಥಾನದಲ್ಲಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಮುನ್ನಡೆ ಸಾಧಿಸುತ್ತಿದ್ದಂತೆ ಮತ ಎಣಿಕೆ ಕೇಂದ್ರದ ಮುಂದೆ ಮುನಿರತ್ನ ಬೆಂಬಲಿಗರು ಸಂಭ್ರಮಾಚರಣೆ ಶುರು ಮಾಡಿದ್ದಾರೆ.

ಎರಡನೇ ಸುತ್ತಿನಲ್ಲೂ ಮುನಿರತ್ನ 16, 581 ಮತ ಪಡೆಯುವ ಮೂಲಕ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿಯ ಮುನಿರಾಜು 2ನೇ ಸುತ್ತಿನಲ್ಲಿ 7901 ಮತ ಗಳಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English