- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಇಂದು ಮಧ್ಯಾಹ್ನ 3 ಗಂಟೆಗೆ ಸಿಇಟಿ ಫಲಿತಾಂಶ ಪ್ರಕಟ… ಈ ವೆಬ್‌ಸೈಟ್‍ಗಳಲ್ಲಿ ಸಿಗಲಿದೆ ರಿಸಲ್ಟ್‌

cet-result [1]ಬೆಂಗಳೂರು: ಕಳೆದ ಏಪ್ರಿಲ್‌ನಲ್ಲಿ ನಡೆದಿದ್ದ ವೃತ್ತಿಪರ ಕೋರ್ಸ್‌ಗಳ ಸಿಇಟಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಳ್ಳಲಿದ್ದು, ಮಧ್ಯಾಹ್ನ 1 ಗಂಟೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಫಲಿತಾಂಶ ಪ್ರಕಟಿಸಲಿದೆ.

ಮಧ್ಯಾಹ್ನ 3 ಗಂಟೆಗೆ ಇಲಾಖೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಉನ್ನತ ಶಿಕ್ಷಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಪ್ರಕಟ ಮಾಡಲಿದ್ದಾರೆ.

ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಆಯುಷ್ ಕೋರ್ಸ್‌‌ಗಳ ಸೀಟಿಗೆ ನೀಟ್ ಪರೀಕ್ಷೆ ನಡೆದಿರುವುದರಿಂದ ಎಂಜಿನಿಯರಿಂಗ್, ಅಗ್ರಿಕಲ್ಚರ್ ಕೋರ್ಸ್‌ಗಳ ಫಲಿತಾಂಶ ಇಂದು ಪ್ರಕಟವಾಗಲಿದೆ.

ಏಪ್ರಿಲ್ 18ರಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಸಿಇಟಿ ಪರೀಕ್ಷೆ ನಡೆದಿತ್ತು. ಒಟ್ಟು 1,98,639 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಸಿಇಟಿ ರಿಸಲ್ಟ್ ವೆಬ್‍ಸೈಟ್ :
http://kea.kar.nic.in
http://cet.kar.nic.in
http://karresults.nic.in