ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ನಿಫಾ ವೈರಸ್ ಈ ತನಕ ಪತ್ತೆಯಾಗಿಲ್ಲ. ಆತಂಕ ಪಡುವುದು ಬೇಡ ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ ರಾವ್ ಹೇಳಿದರು.
ಮಂಗಳೂರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದ.ಕ. ಜಿಲ್ಲೆಯಲ್ಲಿ ನಿಫಾ ವೈರಸ್‌ನ ಶಂಕಿತ ಪ್ರಕರಣಗಳು ಕೂಡ ದಾಖಲಾಗಿಲ್ಲ. ಜನರು ಭಯ ಪಡುವ ಅಗತ್ಯವಿಲ್ಲ ಎಂದರು.
ಕೇರಳ ಸೇರಿದಂತೆ ಹಲವೆಡೆ ನಿಫಾ ವೈರಸ್‌ನಿಂದ ಜನ ಆತಂಕಕ್ಕೀಡಾಗಿದ್ದಾರೆ. ಈ ಬಗ್ಗೆ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುತ್ತಿದೆ.
Click this button or press Ctrl+G to toggle between Kannada and English