ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜಿನ ಕ್ರೀಡಾಪಟುಗಳು ಮತ್ತೆ ದೇಶದ ಗಮನ ಸೆಳೆದಿದ್ದಾರೆ. ಜಪಾನ್ನ ಗಿಫುನಲ್ಲಿ ಜೂನ್ 6ರಿಂದ 10ರವರೆಗೆ ನಡೆಯಲಿರುವ 18ನೇ ಏಷ್ಯನ್ ಜೂನಿಯರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಲಿರುವ ಭಾರತ ತಂಡಕ್ಕೆ ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ 5 ಮಂದಿ ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ.
ಕಳೆದ ತಿಂಗಳು ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ದಕ್ಷಿಣ ಏಷ್ಯನ್ ಕ್ರೀಡಾಕೂಟದಲ್ಲಿ ಈ ಕ್ರೀಡಾಪಟುಗಳು ಪದಕದ ಸಾಧನೆಯನ್ನು ಮಾಡಿದ್ದರು. ಈ ಹಿನ್ನೆಲೆಯಲ್ಲಿ ಈ ಕ್ರೀಡಾಪಟುಗಳು ಏಷ್ಯನ್ ಕ್ರೀಡಾಕೂಟದಲ್ಲಿ ಭಾಗವಹಿಸುವ ಅರ್ಹತೆಯನ್ನು ಪಡೆದಿದ್ದಾರೆ.
100 ಮೀ. ಓಟದಲ್ಲಿ ಪ್ರಜ್ವಲ್ ಮಂದಣ್ಣ , ಶಾಟ್ಪುಟ್ನಲ್ಲಿ ಆಶಿಷ್, 400 ಮೀ. ಓಟದಲ್ಲಿ ಶುಭ ವಿ., ಶಾಟ್ಪುಟ್ನಲ್ಲಿ ಅನಾಮಿಕ ಹಾಗೂ ಎತ್ತರ ಜಿಗಿತದಲ್ಲಿ ಅಭಿನಯ ಶೆಟ್ಟಿ ಜಪಾನ್ ನ ಗಿಫುದಲ್ಲಿ ನಡೆಯಲಿರುವ ಏಷ್ಯನ್ ಜೂನಿಯರ್ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಕ್ರೀಡಾಪಟುಗಳ ಸಾಧನೆಗೆ ಆಳ್ವಾಸ್ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹರ್ಷ ವ್ಯಕ್ತಪಡಿಸಿದ್ದಾರೆ.
Click this button or press Ctrl+G to toggle between Kannada and English