ಬೆಂಗಳೂರು: ತಮಿಳುನಾಡಿನ ಹಿರಿಯ ನಟ, ರಾಜಕಾರಣಿ ಕಮಲ್ ಹಾಸನ್ ಇಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಬೆಳಗ್ಗೆ 11.30 ರ ಸುಮಾರಿಗೆ ಕುಮಾರಸ್ವಾಮಿ ಅವರು ಕಮಲ್ ಹಾಸನ್ ಭೇಟಿ ಮಾಡಲಿರುವುದು ಹಲವು ಕುತೂಹಲಗಳಿಗೆ ಕಾರಣವಾಗಿದೆ.
ಕರ್ನಾಟಕದಲ್ಲಿ ತಮಿಳು ಚಿತ್ರ ಬಿಡುಗಡೆಗೆ ಅಡ್ಡಿ ವಿಚಾರ ಹಾಗೂ ಕಾವೇರಿ ನೀರು ನಿರ್ವಹಣಾ ಮಂಡಳಿ ವಿಚಾರವಾಗಿ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಕುಮಾರಸ್ವಾಮಿ ಪ್ರಮಾಣ ವಚನ ಸಮಾರಂಭಕ್ಕೂ ಆಗಮಿಸಿದ್ದ ಕಮಲ ಹಾಸನ್ ಅವರು, ತೃತೀಯ ರಂಗದ ಮುನ್ನುಡಿಗೆ ಬೆಂಬಲ ಸೂಚಿಸಿದ್ದರು.
Click this button or press Ctrl+G to toggle between Kannada and English