ಮಂಗಳೂರು: ಕುಮಾರಸ್ವಾಮಿ ಪೂರ್ಣಾವಧಿ ಸಿಎಂ ಆಗಿರುವುದಕ್ಕೆ ಯಾವುದೇ ಅಸಮಾಧಾನ ಇಲ್ಲ. ನಮ್ಮ ಪೂರ್ಣ ಸಹಮತ ಇದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ ಹೇಳಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೆಲವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಅಷ್ಟೇ. ಯಾವುದೇ ಅಸಮಾಧಾನ ಇಲ್ಲ. ಸಮ್ಮಿಶ್ರ ಸರ್ಕಾರ ದೃಢವಾಗಿರಬೇಕು, ನಾಯಕತ್ವ ಗಟ್ಟಿಯಾಗಿರಬೇಕು ಎಂಬ ನೆಲೆಯಲ್ಲಿ ಹೈಕಮಾಂಡ್ ತೀರ್ಮಾನ ತೆಗೆದುಕೊಂಡಿದೆ ಎಂದರು.
ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧವಾಗಿದ್ದೇವೆ. ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ ಎಂದು ಸ್ಪಷ್ಟಪಡಿಸಿದರು.
Click this button or press Ctrl+G to toggle between Kannada and English