ನವದೆಹಲಿ: 2022ರ ವೇಳೆಗೆ ಪ್ರತಿಯೊಬ್ಬ ಭಾರತೀಯನಿಗೂ ನಿವಾಸ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ದೆಹಲಿಯಲ್ಲಿ ನಮೋ ಆ್ಯಪ್ ಮೂಲಕ ಪ್ರಧಾನಮಂತ್ರಿ ಗ್ರಾಮೀಣ ಆವಾಸ್ ಯೋಜನೆ ಪಲಾನುಭವಿಗಳೊಂದಿಗೆ ಮೋದಿ ಅವರು ಸಂವಾದ ನಡೆಸಿದರು.
ವಾಸ್ ಯೋಜನೆ ಎಂದರೆ ಕೇವಲ ಇಟ್ಟಿಗೆ, ಗಾರೆಗಳಿಗೆ ಸಂಬಂಧಿಸಿದ್ದಲ್ಲ. ಜನರಿಗೆ ಉತ್ತಮ ಗುಣಮಟ್ಟದ ಜೀವನ ಒದಗಿಸುವುದು. 2022ರ ವೇಳೆಗೆ ಭಾರತ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಆಚರಿಸಿಕೊಳ್ಳುವ ಸಮಯದಲ್ಲಿ ಪ್ರತಿಯೊಬ್ಬ ಭಾರತೀಯ ಮನೆ ಹೊಂದುವಂತಾಗಬೇಕು. ಆ ನಿಟ್ಟಿನಲ್ಲಿ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಎನ್‌ಡಿಎ ಸರ್ಕಾರದ 4 ವರ್ಷಗಳ ಆಡಳಿತದಲ್ಲಿ ಸುಮಾರು ಒಂದು ಕೋಟಿಗೂ ಅಧಿಕ ಮನೆಗಳನ್ನು ನಿರ್ಮಿಸಲಾಗಿದೆ. ಈ ಹಿಂದೆ ಮನೆ ನಿರ್ಮಾಣಕ್ಕೆಂದು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ 70ರಿಂದ 75 ಸಾವಿರ ರೂಪಾಯಿ ನೀಡಲಾಗುತ್ತಿತ್ತು. ಇಂದು ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಅದನ್ನು 1.30 ಲಕ್ಷ ರೂಪಾಯಿಗಳಿಗೆ ಏರಿಸಲಾಗಿದೆ. ಇಂದಿನ ಕೇಂದ್ರ ಸರ್ಕಾರ ಕೇವಲ ಒಂದು ವರ್ಗಕ್ಕೆ ಮಾತ್ರವಲ್ಲದೆ ಎಲ್ಲಾ ವರ್ಗದ ಜನರ ಏಳಿಗೆಗಾಗಿ ಶ್ರಮಿಸುತ್ತಿದೆ ಎಂದರು.
Click this button or press Ctrl+G to toggle between Kannada and English