ಮಂಗಳೂರು: ಉಡುಪಿ ಪೆರ್ಡೂರಿನ ದನದ ವ್ಯಾಪಾರಿ ಹುಸೇನಬ್ಬ ಸಾವು ಪ್ರಕರಣದಲ್ಲಿ ಸಂಘಪರಿವಾರದ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಶೋಭಾ, ಗೋಸಾಗಾಟ ಸಂದರ್ಭದಲ್ಲಿ ಸಂಘಪರಿವಾರ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ವಾಹನ ಅಡ್ಡಗಟ್ಟಿದ ಸಂದರ್ಭದಲ್ಲಿ ದನಸಾಗಾಟದ ವಾಹನ ರಿವರ್ಸ್ ಹೋಗಿ ಅಪಘಾತ ಸಂಭವಿಸಿದೆ. ಈ ಸಂದರ್ಭದಲ್ಲಿ ಸೆರೆಸಿಕ್ಕ ಹುಸೇನಬ್ಬ ಪೊಲೀಸ್ ಜೀಪಿನಲ್ಲಿ ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ಸಂಘಪರಿವಾರದ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಇದರ ವಿರುದ್ಧ ಉಡುಪಿಯಲ್ಲಿ ನಾಳೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
Click this button or press Ctrl+G to toggle between Kannada and English