- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮಂಗಳೂರಿಗೆ ಆಗಮಿಸಿದ ನೂತನ ಸಚಿವ ಯು.ಟಿ.ಖಾದರ್‌ಗೆ ಅದ್ದೂರಿ ಸ್ವಾಗತ

u-t-kader [1]ಮಂಗಳೂರು: ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ.ಖಾದರ್ ಅವರು ಇಂದು ಪೂರ್ವಾಹ್ನ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ್ದು, ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಹಿತೈಷಿಗಳು ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅದ್ದೂರಿಯಾಗಿ ಸ್ವಾಗತಿಸಿದರು.

ಯು.ಟಿ.ಖಾದರ್ ಅವರು ಇಂದು ಬೆಳಗ್ಗೆ 9 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಬೇಕಿತ್ತು. ಆದರೆ ಭಾರೀ ಮಳೆ ಕಾರಣ ಬೆಂಗಳೂರಿನಿಂದ ವಿಮಾನ ಹೊರಡಲು ವಿಳಂಬವಾಗಿತ್ತು. ಆದ್ದರಿಂದ ಅವರು ಮಂಗಳೂರು ವಿಮಾನ ನಿಲ್ದಾಣ ತಲುಪುವಷ್ಟರಲ್ಲಿ 11:30 ಆಗಿತ್ತು. ಈ ವೇಳೆ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಕಾಂಗ್ರೆಸ್ ಕಾರ್ಯಕರ್ತರು, ಹಿತೈಷಿಗಳು ಅವರನ್ನು ಹೂಗುಚ್ಚ ನೀಡಿ, ಹಾರಗಳನ್ನು ಹಾಕಿ ಆತ್ಮೀಯವಾಗಿ ಸ್ವಾಗತಿಸಿದರು.

ಬಳಿಕ ನಗರಕ್ಕೆ ಆಗಮಿಸಿದ ನೂತನ ಸಚಿವರಾದ ಯು.ಟಿ.ಖಾದರ್ ಅವರು ಕಾಂಗ್ರೆಸ್ ಜಿಲ್ಲಾ ಕಚೇರಿಗೆ ಆಗಮಿಸಿದರು. ಈ ವೇಳೆ ಭಾರೀ ಸಂಖ್ಯೆಯಲ್ಲಿ ನೆರೆದಿದ್ದ ಕಾಂಗ್ರೆಸ್ ಕಾರ್ಯಕರ್ತರು, ಸಾರ್ವಜನಿಕರು ಅವರನ್ನು ಅದ್ದೂರಿಯಾಗಿ ಸ್ವಾಗತಿಸಿದರು.