‘ರೈತರ ಬಗ್ಗೆ ಅಪ್ಪ-ಮಕ್ಕಳಿಗೆ ಕಾಳಜಿ ಇದ್ದರೆ ಕಾಂಗ್ರೆಸ್‌ಗೆ ಸಾಲಮನ್ನಾ ಷರತ್ತು ವಿಧಿಸಬೇಕಿತ್ತು’

3:24 PM, Saturday, June 9th, 2018
Share
1 Star2 Stars3 Stars4 Stars5 Stars
(No Ratings Yet)
Loading...

yedyurappaಬೆಂಗಳೂರು: ರೈತರ ಬಗ್ಗೆ ನಿಜವಾದ ಕಾಳಜಿ ಇದ್ದಿದ್ದರೆ ಅಪ್ಪ-ಮಕ್ಕಳು ಸಾಲಮನ್ನಾ ಮಾಡುವ ಷರತ್ತನ್ನು ಕಾಂಗ್ರೆಸ್ ಮುಂದಿಡಬೇಕಿತ್ತು. ಅದರ ಬದಲು ಅಧಿಕಾರ ಉಳಿಸಿಕೊಳ್ಳಲು ಬೇಕಾದ ಷರತ್ತು ಹಾಕಿದ್ದಾರೆ ಎಂದು ದೇವೇಗೌಡ ಹಾಗೂ ಕುಮಾರಸ್ವಾಮಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ಮಲ್ಲೇಶ್ವರಂ ಪಕ್ಷದ ಕಚೇರಿಯಲ್ಲಿ ನಡೆದ ಬಿಜೆಪಿ ರೈತ ಮೋರ್ಚಾ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಯಡಿಯೂರಪ್ಪ ಮಾತನಾಡಿದರು. ಅಪ್ಪ-ಮಕ್ಕಳಿಗೆ ನಿಜವಾಗಲೂ ರೈತರ ಬಗ್ಗೆ ಕಾಳಜಿ ಇದ್ದಿದ್ದರೆ ರೈತರ ಸಾಲಮನ್ನಾ ಮಾಡಿದರೆ ಮಾತ್ರ ಹೊಂದಾಣಿಕೆ ಮಾಡಿಕೊಳ್ಳುತ್ತೇವೆ ಎಂದು ಕಾಂಗ್ರೆಸ್‌ಗೆ ಷರತ್ತು ಹಾಕಬೇಕಿತ್ತು. ಆದರೆ ತಮ್ಮ ಅಧಿಕಾರ ಉಳಿಸಿಕೊಳ್ಳಲು ಬೇಕಾದ ಷರತ್ತು ಮಾತ್ರ ವಿಧಿಸುತ್ತಿದ್ದಾರೆ. ಸಿದ್ದರಾಮಯ್ಯ ಕಾಲದಲ್ಲೇ ಸಣ್ಣ ಮತ್ತು ಅತಿ ಸಣ್ಣ ರೈತರ ಸಾಲಮನ್ನಾ ಮಾಡಲಾಗಿತ್ತು. ಈಗ ಮತ್ತೆ ಅದೇ ಸಾಲಮನ್ನಾ ಮಾಡುತ್ತೇನೆ‌ ಎನ್ನುತ್ತಿದ್ದಾರೆ ಎಂದು ಟೀಕಿಸಿದರು.

ನಾನು ರಾಜ್ಯದ ಜನರ ಮುಲಾಜಿನಲ್ಲಿ ಇಲ್ಲ ಎಂದ ಕುಮಾರಸ್ವಾಮಿ ರಾಜ್ಯದ ಜನರ ಕ್ಷಮೆ ಕೇಳಬೇಕು. ಕುಮಾರಸ್ವಾಮಿ ಬಜೆಟ್ ಮಂಡನೆ ಮಾಡುವವರೆಗೆ ಒಂದು ತಿಂಗಳು ಕಾಯೋಣ. ಅದಾದ ಬಳಿಕವೂ ಸಾಲಮನ್ನಾ ಮಾಡದೇ ಇದ್ದರೆ ಕುಮಾರಸ್ವಾಮಿ ಅಧಿಕಾರ ಬಿಟ್ಟು ತೊಲಗುವ ರೀತಿಯಲ್ಲಿ ಹೋರಾಟ ಹಮ್ಮಿಕೊಳ್ಳೋಣ ಎಂದು ಕರೆ ನೀಡಿದರು.

ಹಾಲಿನ ದರಕ್ಕೆ ನೀಡುವ ಪ್ರೋತ್ಸಾಹ ಧನ ಕಡಿತ ಮಾಡಿದ್ದಾರೆ‌. ಫೆಬ್ರವರಿಯಿಂದ ಇಲ್ಲಿಯವರಗೆ ರೈತರಿಗೆ ವಿತರಣೆಯಾಗಿಲ್ಲ. ನದಿ ದಾಟಿದ ಮೇಲೆ ಅಂಬಿಗನ ಹಂಗೇಕೆ ಎಂಬುದು ಕುಮಾರಸ್ವಾಮಿಯವರ ನಡವಳಿಕೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಲಕ್ಷ್ಮಣ ಸವದಿ ಮಾತನಾಡಿ, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ರೈತರ ಶಾಪ ಇದೆ. ವಚನ ಭ್ರಷ್ಟನೆಂಬ ಹಣೆಪಟ್ಟಿ ಇದೆ. ಈ ಶಾಪ ವಿಮೋಚನೆ ಆಗಬೇಕಾದರೆ ಕುಮಾರಸ್ವಾಮಿ ಯಾವುದೇ ಷರತ್ತುಗಳನ್ನು ಹಾಕದೆ ರೈತರ ಎಲ್ಲ ಬಗೆಯ ಸಾಲಮನ್ನಾ ಮಾಡಬೇಕು. ಕಬ್ಬು ಬೆಳೆಗಾರರಿಗೂ ಭಾರಿ ಪ್ರಮಾಣದಲ್ಲಿ ಅನ್ಯಾಯವಾಗಿದೆ ಎಂದು ಕಿಡಿಕಾರಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English