ಕಾನತ್ತೂರಿನಲ್ಲಿ ಏನು ಪ್ರಾರ್ಥನೆ ಮಾಡಿದ್ದೇನೆ ಅನ್ನೋದು ನನಗೆ, ದೈವಗಳಿಗೆ ಬಿಟ್ಟಿದ್ದು : ರಮಾನಾಥ್ ರೈ

1:26 PM, Monday, June 11th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

Kanathoorಮಂಗಳೂರು : ಬಂಟ್ವಾಳದ ಬಿಸಿ ರೋಡ್ ನಲ್ಲಿ ಹತ್ಯೆಗೀಡಾಗಿದ್ದ ಆರ್ ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ್ ಹತ್ಯೆಗೆ ರಮಾನಾಥ್ ರೈ ಅವರೇ ಕಾರಣ ಅವರ ಬೆಂಬಲಿಗರು ಇದನ್ನು ಮಾಡಿದ್ದಾರೆ ಎಂಬ ವ್ಯವಸ್ಥಿತ ಅಪಪ್ರಚಾರ ಮಾಡಿದ ಕಾರಣ ತಮಗೆ ಸೋಲಾಗಿದೆ ಎಂಬುದು  ಸುಳ್ಳು,  ಅವರಿಗೆ ಶಿಕ್ಷೆ ಆಗಬೇಕು  ಎಂದು ಕಾನತ್ತೂರಿಗೆ ಭೇಟಿ ನೀಡಿ ದೈವಗಳ ಸನ್ನಿಧಾನದಲ್ಲಿ ದೂರು ನೀಡಿದ್ದಾರೆ.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ಪೈಕಿ 7 ಕಾಂಗ್ರೆಸ್ ಹೀನಾಯವಾಗಿ ಸೋತಿದೆ. ಕೇವಲ ಮುಸ್ಲಿಂ ಮತದಾರರು ಅಧಿಕವಿರುವ  ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಯು.ಟಿ ಖಾದರ್ ಗೆಲುವು ಸಾಧಿಸಿದ್ದಾರೆ. ಜಿಲ್ಲೆಯಲ್ಲಿ ರಮಾನಾಥ್ ರೈ, ಅಭಯ ಚಂದ್ರ ಜೈನ್ ರಂತಹ ಘಟಾನುಘಟಿ ಕಾಂಗ್ರೆಸ್ ನಾಯಕರೇ ಈ ಬಾರಿಯ ಚುನಾವಣೆಯಲ್ಲಿ ಊಹಿಸಲೂ ಸಾಧ್ಯವಾಗದ ಮತಗಳ ಅಂತರದಲ್ಲಿ ಸೋಲನುಭವಿಸಿದ್ದಾರೆ.

ಬಂಟ್ವಾಳದಲ್ಲಿ ತನ್ನ ಸೋಲಿಗೆ ಅಪಪ್ರಚಾರವೇ ಕಾರಣ. ಆರ್ ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ್ ಹತ್ಯೆಗೆ ರಮಾನಾಥ್ ರೈ ಅವರೇ ಕಾರಣ ಎಂಬ ವ್ಯವಸ್ಥಿತ ಅಪಪ್ರಚಾರ ಮಾಡಿದ ಕಾರಣ ತಮಗೆ ಸೋಲಾಗಿದೆ ಎಂಬುದು ರಮಾನಾಥ್ ರೈ ಅವರ ಆರೋಪ .

ಈ ಕಾರಣ ಮನನೊಂದಿರುವ ಮಾಜಿ ಸಚಿವ ಬಿ.ರಮಾನಾಥ ರೈ ಕಾರಣಿಕ ಕ್ಷೇತ್ರ ಶ್ರೀ ನಾಲ್ಕರ್ ದೈವಸ್ಥಾನ ಕಾನತ್ತೂರಿಗೆ ಭೇಟಿ ನೀಡಿ ದೈವಗಳ ಸನ್ನಿಧಾನದಲ್ಲಿ ದೂರು ನೀಡಿದ್ದಾರೆ.

ತನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಿರುವವರನ್ನು ಕರೆದು ವಿಚಾರಣೆ ನಡೆಸಬೇಕು ಎಂದು ಬಿ.ರಮಾನಾಥ ರೈಯವರು ದೈವಸ್ಥಾನದಲ್ಲಿ ವಿನಂತಿ ಮಾಡಿದ್ದಾರೆ ಎಂದು ಹೇಳಲಾಗಿದೆ.

ನಾನು ಕಾನತ್ತೂರಿಗೆ ಭೇಟಿ ನೀಡಿದ್ದೇನೆ. ನಾನೊಬ್ಬ ಪರಿಪೂರ್ಣ ಆಸ್ತಿಕವಾದಿ. ದೈವ ದೇವರುಗಳ ಮೇಲೆ ಅಚಲ ನಂಬಿಕೆ ಹೊಂದಿದ್ದೇನೆ. ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ಕಾನತ್ತೂರಿನಲ್ಲಿ ಪ್ರಾರ್ಥನೆ ಮಾಡಿದ್ದೇನೆ ಸಚಿವ ಎಂದು ರಮಾನಾಥ ರೈ  ಹೇಳಿದ್ದಾರೆ.

ಏನು ಪ್ರಾರ್ಥನೆ ಅನ್ನೋದು ನನಗೆ, ದೈವಗಳಿಗೆ ಬಿಟ್ಟಿದ್ದು. ಶರತ್ ಮಡಿವಾಳ ಹತ್ಯೆ ಪ್ರಕರಣದಲ್ಲಿ ಆರೋಪಿಗಳ ಪತ್ತೆಯಾಗಿದೆ. ಆದರೂ ನನ್ನ ವಿರುದ್ದ ಆರೋಪ ಮಾಡಿರುವುದು ಯಾವ ನ್ಯಾಯ ? ಅದಕ್ಕಾಗಿ ಕಾನತ್ತೂರು ದೈವಸ್ಥಾನದಮೆಟ್ಟಿಲು ಹತ್ತಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English