ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ವಿರುದ್ಧ ಎಸಿಬಿಗೆ ದೂರು

3:05 PM, Tuesday, June 12th, 2018
Share
1 Star2 Stars3 Stars4 Stars5 Stars
(No Ratings Yet)
Loading...

complientಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರ ವಿರುದ್ಧ ಅಧಿಕಾರ ದುರ್ಬಳಕೆ ಆರೋಪದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಯಲ್ಲಿ ದೂರು ದಾಖಲಿಸಲಾಗಿದೆ.

ಉದ್ಯೋಗ ಮತ್ತಿ ತರಬೇತಿ ಇಲಾಖೆಯ ಮಾಜಿ ನೌಕರ ಶಂಕರ ದೇವೇಗೌಡ ಎಂಬುವರು ಈ ದೂರು ನೀಡಿದ್ದಾರೆ. ಉದ್ಯೋಗ ಮತ್ತು ತರಬೇತಿ ಇಲಾಖೆಯ ಒಟ್ಟು 62 ಜನರಿಗೆ ಹಿಂಬಡ್ತಿ ನೀಡಿ ಸುಪ್ರೀಂ ಕೋರ್ಟ್ ಆದೇಶಿಸಿದೆ. ಆದರೂ ಮುಖ್ಯ ಕಾರ್ಯದರ್ಶಿ ರತ್ನ ಪ್ರಭಾ ಅವರು ಸುಪ್ರೀಂ ಕೋರ್ಟ್ ತೀರ್ಪಿಗೆ ವ್ಯತಿರಿಕ್ತವಾಗಿ ಸುಪ್ರೀಂ ಆದೇಶ ಜಾರಿಗೆ ತರದಂತೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಸುಪ್ರೀಂ ಕೋರ್ಟ್ ಆದೇಶ ಜಾರಿಗೊಳಿಸದಂತೆ ಇಲಾಖಾ ಕಾರ್ಯದರ್ಶಿಗೆ ಒತ್ತಡ ಹೇರಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ರತ್ನ ಪ್ರಭಾ ಅವರು ಸುಪ್ರೀಂ ಕೋರ್ಟ್ ಆದೇಶ ಜಾರಿಯಾಗದಂತೆ ಕೊನೆಯ ಕ್ಷಣದಲ್ಲಿ ತಡೆ ಹಿಡಿದು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರು ಸ್ವೀಕರಿಸಿರುವ ಎಸಿಬಿ ಅಧಿಕಾರಿಗಳು, ಕಾನೂನು ಸಲಹೆ ಪಡೆದ ನಂತರ ಪ್ರಕರಣದ ತನಿಖೆ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English