ಬೆಂಗಳೂರು: ಜಯನಗರ ವಿಧಾನಸಭಾ ಚುನಾವಣೆ 2018ರ ಫಲಿತಾಂಶ ಹೊರ ಬಿದ್ದಿದೆ. ಮಾಜಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಇಲ್ಲಿ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದು ಭರ್ಜರಿ ಜಯ ದಾಖಲಿಸಿದ್ದಾರೆ. ಅವರಿಗೆ ತೀವ್ರ ಸ್ಪರ್ಧೆಯೊಡ್ಡಿದ ಬಿಜೆಪಿಯ ಬಿ.ಎನ್. ಪ್ರಹ್ಲಾದ್ ಇಲ್ಲಿ ಸೋಲೊಪ್ಪಿಕೊಂಡಿದ್ದಾರೆ.
ಇನ್ನು ಅಬ್ಬರದ ಪ್ರಚಾರ ನಡೆಸಿದ್ದ ಪಕ್ಷೇತರ ಅಭ್ಯರ್ಥಿ ರವಿಕೃಷ್ಣಾ ರೆಡ್ಡಿ ಠೇವಣಿಯೂ ಉಳಿಸಿಕೊಳ್ಳಲಾಗದೆ ಮುಖಭಂಗ ಅನುಭವಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಬಿ.ಎನ್. ವಿಜಯಕುಮಾರ್ ಅವರ ನಿಧನದಿಂದ ಇಲ್ಲಿನ ಚುನಾವಣೆ ಜೂನ್ 11ಕ್ಕೆ ಮುಂದೂಡಿತ್ತು. ಸೋಮವಾರ ನಡೆದ ಚುನಾವಣೆಯಲ್ಲಿ ಒಟ್ಟು ಶೇಕಡಾ 55 ಮತದಾನವಾಗಿತ್ತು. ಇಲ್ಲಿ ಒಟ್ಟು 19 ಅಭ್ಯರ್ಥಿಗಳು ಕಣದಲ್ಲಿದ್ದರು.
Click this button or press Ctrl+G to toggle between Kannada and English