ಬೆಂಗಳೂರು: ರಾಜ್ಯ ವಿಧಾನಸಭೆಯ ಜಯನಗರ ಕ್ಷೇತ್ರದಲ್ಲಿ ಹಾಗೂ ವಿಧಾನ ಪರಿಷತ್ ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಸಾಧಿಸಿದ ಗೆಲುವಿಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸಂತಸ ವ್ಯಕ್ತಪಡಿಸಿದ್ದಾರೆ.
ಟ್ವಿಟ್ಟರ್ ಮೂಲಕ ತಮ್ಮ ಸಂತಸ ಹಂಚಿಕೊಂಡಿರುವ ಅವರು ಗೆದ್ದ ಅಭ್ಯರ್ಥಿಗಳಿಗೆ ಈ ಮೂಲಕ ಅಭಿನಂದನೆ ಕೂಡ ಸಲ್ಲಿಸಿದ್ದಾರೆ.
ಜಯನಗರ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಅನುಕಂಪದ ಅಲೆಯನ್ನೂ ಮೀರಿ ಉತ್ತಮ ಗೆಲುವು ಸಾಧಿಸಿರುವ ಸೌಮ್ಯ ರೆಡ್ಡಿಗೆ ಪರಮೇಶ್ವರ್ ಶುಭಾಶಯ ತಿಳಿಸಿದ್ದಾರೆ. ಈ ಗೆಲುವಿಗೆ ಕಾರಣರಾದ ಮತದಾರರನ್ನು ಅಭಿನಂದಿಸಿರುವ ಅವರು, ಬೆಂಗಳೂರು ನಗರದ 28 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಅತಿಹೆಚ್ಚು ಸ್ಥಾನ ಗಳಿಸಿಕೊಟ್ಟ ಮತದಾರರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ವಿಧಾನಪರಿಷತ್ ಚುನಾವಣೆಯಲ್ಲಿ ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸಿನ ಶ್ರೀ ಚಂದ್ರಶೇಖರ್ ಪಾಟೀಲ್ ಅವರಿಗೆ ನನ್ನ ತುಂಬು ಹೃದಯದ ಅಭಿನಂದನೆಗಳು.
ಶಿಕ್ಷಕರು ಮತ್ತು ಪದವೀಧರರನ್ನು ಪ್ರತಿನಿಧಿಸುವ ಮಹತ್ತರ ಜವಾಬ್ದಾರಿಯನ್ನು ನೀವು ನಿಭಾಯಿಸುತ್ತೀರಿ ಎನ್ನುವ ವಿಶ್ವಾಸ ನನ್ನದು!
ಸಾಧಿಸಿರುವ ಕಾಂಗ್ರೆಸ್‌ನ ಚಂದ್ರಶೇಖರ್ ಪಾಟೀಲರಿಗೂ ಪರಮೇಶ್ವರ್ ಅಭಿನಂದನೆ ತಿಳಿಸಿದ್ದಾರೆ. ಶಿಕ್ಷಕರು ಮತ್ತು ಪದವೀಧರರನ್ನು ಪ್ರತಿನಿಧಿಸುವ ಮಹತ್ತರ ಜವಾಬ್ದಾರಿಯನ್ನು ನೀವು ನಿಭಾಯಿಸುತ್ತೀರಿ ಎನ್ನುವ ವಿಶ್ವಾಸ ನನ್ನದು. ಎಲ್ಲಾ ವಿಜೇತರಿಗೆ ಶುಭಾಶಯ ಎಂದಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಪಕ್ಷದ ಗೆಲುವಿಗೆ ಹರ್ಷ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳಿಗೆ ಮಾತನಾಡಿರುವ ಅವರು, ಜಯನಗರ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ಅವರು ಗೆಲ್ಲುವ ನಿರೀಕ್ಷೆ ಇತ್ತು. ನಮ್ಮ ನಿರೀಕ್ಷೆ ಪ್ರಕಾರ ಅವರು ಜಯ ಸಾಧಿಸಿದ್ದಾರೆ. ಸೌಮ್ಯ ರೆಡ್ಡಿ ಅವರನ್ನು ಅಭಿನಂದಿಸುತ್ತೇನೆ. ಅವರ ಗೆಲುವಿಗೆ ಕಾರಣರಾದ ಕ್ಷೇತ್ರದ ಮತದಾರರು ಹಾಗೂ ಚುನಾವಣೆಯಲ್ಲಿ ಶ್ರಮಿಸಿದ ಪಕ್ಷದ ಎಲ್ಲ ಕಾರ್ಯಕರ್ತರು, ಮುಖಂಡರಿಗೆ ಕೃತಜ್ಞತೆ ಎಂದಿದ್ದಾರೆ.
Click this button or press Ctrl+G to toggle between Kannada and English