ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಪುತ್ತೂರು ಸುಳ್ಯ ತಾಲೂಕಿನಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬೆಳ್ತಂಗಡಿ, ಸುಳ್ಯ, ಪುತ್ತೂರು ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ನಿನ್ನೆ ರಾತ್ರಿಯಿಂದ ಈ ಮೂರು ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುಂಜಾಗ್ರತ ಕ್ರಮವಾಗಿ ಪುತ್ತೂರು ಸಹಾಯಕ ಆಯುಕ್ತ ಕೃಷ್ಣಮೂರ್ತಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.
Click this button or press Ctrl+G to toggle between Kannada and English