ಹುಬ್ಬಳ್ಳಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಲ್ಲಿ ಬಿಜೆಪಿ ಪಾತ್ರವಿಲ್ಲ. ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ನಿಜವಾದ ಆರೋಪಿಗಳಿಗೆ ಶಿಕ್ಷೆಯಾಗಬೇಕು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸದ್ಯ ಎಸ್‌ಐಟಿ ಅಧಿಕಾರಿಗಳು ಕೆಲವರನ್ನು ಬಂಧಿಸಿದ್ದಾರೆ. ಇನ್ನು ಅವರ ಮೇಲೆ ತನಿಖೆಯಾಗಬೇಕು. ತನಿಖೆ ನಂತರ ತಪ್ಪಿತಸ್ಥರು ಯಾರೆಂದು ಗೊತ್ತಾಗಲಿದೆ. ತಪ್ಪು ಯಾರೇ ಮಾಡಿದ್ರು ಅವರಿಗೆ ಶಿಕ್ಷೆಯಾಗಲಿ ಎಂದರು.
ಇದೇ ವೇಳೆ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ನಾವು ಒಂದಾಗೇ ಇದ್ದೇವೆ. ಬೇರೆಯಾಗುವ ಮಾತೆಲ್ಲಿಂದ ಬಂತು. ಪ್ರತ್ಯೇಕ ಧರ್ಮಕ್ಕಾಗಿ ಹೋರಾಟ ಮಾಡಿದವರನ್ನ ಜನ ಮನೆಗೆ ಕಳಿಸಿದ್ದಾರೆ ಎಂದು ಟೀಕಿಸಿದರು.
ಸದ್ಯ ಮತ್ತೆ ಅವರು ಕಾನೂನು ಹೋರಾಟ ಮಾಡುತ್ತೇವೆ ಎನ್ನುತ್ತಾರೆ. ಚುನಾವಣೆ ಮೊದಲೇ ಕಾನೂನು ಹೋರಾಟ ಮಾಡಬೇಕಿತ್ತು. ಅವಾಗ ಮಾಡಿದ್ದು ಏಕೆ. ಚುನಾವಣೆಯಲ್ಲಿ ಪ್ರತ್ಯೇಕ ಧರ್ಮ ಅಂತ ಚೂ ಬಿಟ್ಟರು. ಆದ್ರೆ ಜನ ಅದನ್ನ ನಂಬಲಿಲ್ಲ. ಸದ್ಯ ಅವರ ಬಳಿ ಜನರೂ ಬರಲ್ಲ. ಹೀಗಾಗಿ ಕಾನೂನು ಹೋರಾಟ ಅಂತಿದ್ದಾರೆ ಎಂದು ಜಾಮದಾರ ಹೇಳಿಕೆಗೆ ಶೆಟ್ಟರ್ ತಿರುಗೇಟು ನೀಡಿದರು.
Click this button or press Ctrl+G to toggle between Kannada and English