ಮೈಸೂರು: ಸಮ್ಮಿಶ್ರ ಸರ್ಕಾರದಲ್ಲಿ ಅಸಮಾಧಾನಗೊಂಡಿರುವ ಶಾಸಕರಿಗೆ ನಿಗಮ-ಮಂಡಳಿ ಸ್ಥಾನ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ನಿಗಮ-ಮಂಡಳಿ ಅಧ್ಯಕ್ಷ ಸ್ಥಾನಗಳಿಗೆ ಮುಂದಿನ ಒಂದು ವಾರದೊಳಗೆ ಸಿಎಂ ಹಾಗೂ ಉಪ ಮುಖ್ಯಮಂತ್ರಿಗಳು ಚರ್ಚಿಸಿ 30 ಶಾಸಕರನ್ನು ನೇಮಕ ಮಾಡಲಿದ್ದಾರೆ ಎಂದು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.
ಆದರೆ ಕೆಲ ಶಾಸಕರು ಸಚಿವ ಸ್ಥಾನಕ್ಕೆ ಪಟ್ಟು ಹಿಡಿದಿರುವುದರಿಂದ ಅವರ ಓಲೈಕೆಗೂ ತೆರೆಯಲ್ಲಿ ಕಸರತ್ತು ನಡೆಯುತ್ತಿದೆ. ಈ ನಡುವೆ ನಿಗಮ-ಮಂಡಳಿ ಸ್ಥಾನಕ್ಕೆ ತೃಪ್ತರಾಗುತ್ತಾರಾ ಎಂಬುವುದು ಕುತೂಹಲ ಮೂಡಿಸಿದೆ.
Click this button or press Ctrl+G to toggle between Kannada and English