ಬೆಂಗಳೂರು: ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಿದ್ದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಾನೂನು ಕಂಟಕ ಎದುರಾಗಿದೆ.
ಮಾಜಿ ಸಿಎಂ ವಿರುದ್ಧ ಎಫ್ಐಆರ್ ದಾಖಲಿಸಲು ಮೈಸೂರಿನ 2ನೇ ಪ್ರಧಾನ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದ ಹಿನ್ನಲೆಯಲ್ಲಿ 25 ವರ್ಷಗಳಷ್ಟು ಹಳೆಯದಾದ ಪ್ರಕರಣಕ್ಕೆ ಈಗ ಮತ್ತೆ ಮರುಜೀವ ಬಂದಿದೆ.
ವಿಜಯನಗರ 2ನೇ ಹಂತದಲ್ಲಿ ಅಕ್ರಮವಾಗಿ ನಗರಾಭಿವೃದ್ಧಿ ಪ್ರಾಧಿಕಾರದ ಕಾಯ್ದೆ ಉಲ್ಲಂಘಿಸಿ ಸಿದ್ದರಾಮಯ್ಯ ನಿವೇಶನ ಪಡೆದಿದ್ದರು. ಸಿದ್ದರಾಮಯ್ಯ ಡಿಸಿಎಂ ಆಗಿದ್ದ ವೇಳೆ ಈ ಭೂ ಅಕ್ರಮ ನಡೆದಿತ್ತು ಎಂದು ಆರೋಪಿಸಲಾಗಿದೆ.
ಅಲ್ಲದೆ, ಸಿಎಂ ಆಗಿದ್ದ ವೇಳೆ ತಮ್ಮ ಆಪ್ತರಿಗೆ ಮತ್ತೆ ನಿವೇಶನ ಮಂಜೂರು ಮಾಡಿಸಿದ್ದರು ಎಂದು ಸಿದ್ದರಾಮಯ್ಯ ಸೇರಿದಂತೆ ನಾಲ್ಕು ಜನರ ವಿರುದ್ಧ 9 ಕ್ರಿಮಿನಲ್ ಸೆಕ್ಷನ್‌ಗಳಡಿ ಕೇಸ್ ದಾಖಲಿಸಲು ನ್ಯಾಯಾಲಯ ಆದೇಶಿಸಿದೆ. ಈ ಸಂಬಂಧ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಸೆಕ್ಷನ್ 120ಬಿ, 197, 166, 167, 169, 200, 417, 409, 420 ಹಾಗೂ ಐಪಿಸಿ ಸೆಕ್ಷನ್ 468 ಅಡಿ ಪ್ರಕರಣ ದಾಖಲಾಗಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೇ ಆರಂಭವಾಗಿದ್ದ ಈ ಕಾನೂನು ಹೋರಾಟಕ್ಕೆ ಮಾಜಿ ಆದ ಮೇಲೆ ಸಂಕಷ್ಟ ಎದುರಾಗಿದೆ. ವಕೀಲ ಗಂಗರಾಜು ಹಾಗೂ ಸಂಗಮೇಶ್ ಎಂಬುವರು ದೂರು ದಾಖಲಿಸಿದ್ದರು.
Click this button or press Ctrl+G to toggle between Kannada and English