- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ರಾಜ್ಯದ ಅಭಿವೃದ್ಧಿಯ ಬಗ್ಗೆ ಎಐಸಿಸಿ ಅಧಕ್ಷ ರಾಹುಲ್ ಗಾಂಧಿ ಅವರೊಂದಿಗೆ ಚರ್ಚೆ: ಎಚ್.ಡಿ.ಕುಮಾರಸ್ವಾಮಿ

rahul-gandhi [1]ಹೊಸದಿಲ್ಲಿ: ರಾಜ್ಯದಲ್ಲಿ ಐದು ವರ್ಷಗಳ ಕಾಲ ಸುಭದ್ರವಾಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯ ಸರಕಾರವನ್ನು ಮುನ್ನಡೆಸಿಕೊಂಡು ಹೋಗುವ ಬಗ್ಗೆ, ರಾಜ್ಯದ ಅಭಿವೃದ್ಧಿಯ ಬಗ್ಗೆ ಎಐಸಿಸಿ ಅಧಕ್ಷ ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಿದ್ದಾಗಿ ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ರಾಹುಲ್ ಗಾಂಧಿಯವರನ್ನು ಹೊಸದಿಲ್ಲಿಯಲ್ಲಿರುವ ಅವರ ನಿವಾಸದಲ್ಲಿಂದು ಭೇಟಿಯಾದ ಬಳಿಕ ಮುಖ್ಯಮಂತ್ರಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

ರಾಹುಲ್ ಅವರೊಂದಿಗೆ ಸೌಹಾರ್ದಯುತ ಮಾತುಕತೆಗಾಗಿ ಭೇಟಿಯಾಗಿದ್ದೇನೆ. ಈ ವೇಳೆ ರಾಜ್ಯದ ಅಭಿವೃದ್ಧಿಗೆ ಪೂರಕವಾದ ಹಲವು ಕ್ರಮಗಳ ಬಗ್ಗೆ ಚರ್ಚಿಸಿದ್ದು, ಅವರು ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

ರಾಜ್ಯ ಸಚಿವ ಸಂಪುಟ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ. ಸಂಪುಟ ಯಾವಾಗ ವಿಸ್ತರಣೆ ಮಾಡಬೇಕು ಎನ್ನುವುದನ್ನು ಕಾಂಗ್ರೆಸ್ ಪಕ್ಷ ನಿರ್ಧರಿಸಬೇಕು. ಈ ಬಗ್ಗೆ ನನ್ನದೇನು ತಕರಾರು ಇಲ್ಲ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.

ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಕಾವೇರಿ ನಿರ್ವಹಣಾ ಪ್ರಾಧಿಕಾರದ ಬಗ್ಗೆ ಚರ್ಚಿಸಲಿದ್ದೇನೆ. ಈ ಪ್ರಾಧಿಕಾರಕ್ಕೆ 10 ದಿನಗಳಿಗೊಮ್ಮೆ ನಮ್ಮ ಜಲಾಶಯಗಳ ನೀರಿನ ಮಟ್ಟವನ್ನು ಅಳೆಯಲು ಅವಕಾಶ ನೀಡಿರುವುದು ಅವೈಜ್ಞಾನಿಕ ಕ್ರಮ. ಈ ಬಗ್ಗೆ ಪ್ರಧಾನಿಯೊಂದಿಗೆ ಮಾತುಕತೆ ನಡೆಸಲಿದ್ದೇನೆ ಎಂದು ಮುಖ್ಯಮಂತ್ರಿ ತಿಳಿಸಿದರು.