ಜಮ್ಮು-ಕಾಶ್ಮೀರದಲ್ಲಿ ಮುರಿದು ಬಿದ್ದ ಬಿಜೆಪಿ-ಪಿಡಿಪಿ ಮೈತ್ರಿ

2:56 PM, Tuesday, June 19th, 2018
Share
1 Star2 Stars3 Stars4 Stars5 Stars
(No Ratings Yet)
Loading...

jammu-kashmirಶ್ರೀನಗರ: ಜಮ್ಮು-ಕಾಶ್ಮೀರದ ಬಿಜೆಪಿ ಮತ್ತು ಪಿಡಿಪಿ ಮೈತ್ರಿ ಸರ್ಕಾರ ಮುರಿದು ಬಿದ್ದಿದೆ. ಸಮ್ಮಿಶ್ರ ಸರ್ಕಾರದಿಂದ ಬಿಜೆಪಿ ಹೊರ ಬಂದಿದೆ.

2014ರಲ್ಲಿ ನಡೆದ ಜಮ್ಮು-ಕಾಶ್ಮೀರದ ಚುನಾವಣೆಯಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಿತ್ತು. ಸುಮಾರು ಎರಡು ತಿಂಗಳ ಕಾಲ ಸರ್ಕಾರ ರಚನೆ ಕಸರತ್ತು ನಡೆಸಿದ ಬಳಿಕ, ತಮ್ಮ-ತಮ್ಮ ಸಿದ್ಧಾಂತಗಳನ್ನು ಬದಿಗೊತ್ತಿ ಬಿಜೆಪಿ ಮತ್ತು ಪಿಡಿಪಿ ಮೈತ್ರಿ ಸರ್ಕಾರ ರಚಿಸಿದ್ದವು.

ಪಿಡಿಪಿ ಮುಖ್ಯಮಂತ್ರಿ ಸ್ಥಾನ ಹಾಗೂ ಬಿಜೆಪಿ ಉಪಮುಖ್ಯಮಂತ್ರಿ ಹುದ್ದೆಯನ್ನು ಹಂಚಿಕೊಂಡಿದ್ದವು. ಆದರೆ, ಇಂದು ಏಕಾಏಕಿ ಜಮ್ಮು-ಕಾಶ್ಮೀರದ ಮೈತ್ರಿ ಸರ್ಕಾರದಿಂದ ಕೇಂದ್ರದ ಆಡಳಿತಾರೂಢ ಬಿಜೆಪಿ ಹೊರ ಬಂದಿದೆ.

ಬಿಜೆಪಿ ಹಿರಿಯ ಮುಖಂಡ ರಾಮ್‌ ಮಾಧವ್‌ ಇಂದು ಸುದ್ದಿಗೋಷ್ಠಿ ನಡೆಸಿ ಈ ವಿಷಯ ಪ್ರಕಟಿಸಿದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English