ಮಂಗಳೂರು : ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಮಂಗಳವಾರ ಮಳೆಯ ನಡುವೆಯೇ ಚಾರ್ಮಾಡಿ ರಸ್ತೆಯನ್ನು ವೀಕ್ಷಿಸಿ ಅಧಿಕಾರಿಗಳಿಗೆ ಕಾಮಗಾರಿಗಳನ್ನು ಶೀಘ್ರವೇ ಮುಗಿಸಬೇಕು ಎಂದು ಸೂಚನೆ ನೀಡಿದರು.
ರಸ್ತೆ ವೀಕ್ಷಣೆ ಬಳಿಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಳ್ತಂಗಡಿಯ ಶಾಂತಿವನದಲ್ಲಿ ಭೇಟಿ ಮಾಡಿದರು.
ಸಮ್ಮಿಶ್ರ ಸರ್ಕಾರ ರಚನೆಯಾದ ಬಳಿಕ ಇದೇ ಮೊದಲ ಬಾರಿಗೆ ಇಬ್ಬರು ನಾಯಕರು ಭೇಟಿಯಾಗಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧರ್ಮಸ್ಥಳದ ಶಾಂತಿವನದಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.
Click this button or press Ctrl+G to toggle between Kannada and English