ನನ್ನ ಬಳಿಯೂ ಕೆಲವರ ಡೈರಿಗಳಿವೆ..ಯಾರು ಯಾರಿಗೆ ಏನೇನು ಬರೆದಿದ್ದಾರೆ ಅನ್ನೋದು ಗೊತ್ತಿದೆ: ಡಿ.ಕೆ.ಶಿವಕುಮಾರ್

4:00 PM, Wednesday, June 20th, 2018
Share
1 Star2 Stars3 Stars4 Stars5 Stars
(No Ratings Yet)
Loading...

ಬೆಂಗಳೂರು:‌ ನನ್ನ ಬಳಿಯೂ ಕೆಲವರ ಡೈರಿಗಳಿವೆ. ಯಾರು ಯಾರಿಗೆ ಏನೇನು ಬರೆದಿದ್ದಾರೆ ಅನ್ನೋದು ಗೊತ್ತಿದೆ. ಕೊನೆಯಲ್ಲಿ ಏನೂ ಆಗಲ್ಲವೆಂದಾಗ ಅದನ್ನ ಬಹಿರಂಗ ಮಾಡುತ್ತೇನೆ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಐಟಿ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸುತ್ತಾ, ನನ್ನನ್ನ ಹೆದರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಡಿಕೆಶಿ ಯಾವುದಕ್ಕೂ ಹೆದರುವುದಿಲ್ಲ. ನಾನು ಕಾನೂನಿಗೆ ಬೆಲೆ ಕೊಡುವವನು. ಪ್ರಕರಣ ಈಗ ಕೋರ್ಟ್‌ನಲ್ಲಿ ಇರೋದ್ರಿಂದ ಈಗ ಏನು ಹೇಳೋದಿಲ್ಲ. ಇಲ್ಲವಾಗಿದ್ದರೆ ನಾನೇನು ಅನ್ನೋದನ್ನ ತೋರಿಸುತ್ತಿದ್ದೆ. ಈಗ ಒಂದು ಐಟಿ ಕೇಸ್ ಫಿಟ್ ಮಾಡಿದ್ದಾರೆ ಎಂದು ಕಿಡಿಕಾರಿದರು.

ಯಾರೋ ಏನೋ ಹೇಳಿಕೆ ಕೊಟ್ಟರು ಅಂತ ನನ್ನನ್ನು ಸಿಕ್ಕಿಸೋಕೆ ಆಗಲ್ಲ. ಇದೆಲ್ಲಾ ಯಾಕೆ ಮಾಡ್ತಿದ್ದಾರೆ ಅನ್ನೋದು ಗೊತ್ತಿದೆ. ಖುದ್ದಾಗಿ ವಿಚಾರಣೆಗೆ ಹಾಜರಾಗಬೇಕೆಂದು ನನಗೆ, ತಾಯಿಗೆ, ಸಹೋದರನಿಗೆ ನೊಟೀಸ್ ಬಂದಿದೆ. ಇನ್ನೆರಡು ದಿನಗಳಲ್ಲಿ ನ್ಯಾಯಾಲಯದಿಂದ ಸಮನ್ಸ್ ಬರಬಹುದು. ಪೋಸ್ಟಲ್ ಮೂಲಕ ಸಮನ್ಸ್ ಬರಬಹುದು. ವಿಚಾರಣೆಗೆ ಹಾಜರಾಗುತ್ತೇವೆ. ನಮಗೆ ನ್ಯಾಯಾಲಯದ ಮೇಲೆ ನಂಬಿಕೆ ಇದೆ ಎಂದು ಸಚಿವ ಡಿಕೆಶಿ ಸ್ಪಷ್ಟಪಡಿಸಿದರು.

ನಾನು ರಾಜೀನಾಮೆ ಕೊಡಬೇಕೆಂದು ಬಿಜೆಪಿ ಆಗ್ರಹಿಸುತ್ತಿದೆ. ಬಿಜೆಪಿ ಸ್ನೇಹಿತರ ಮೇಲೆ ಇರುವ ಪ್ರಕರಣಗಳನ್ನು ಅವರಿಗೆ ನೆನಪಿಸಬೇಕಾ? ಬಿಜೆಪಿ ಯಾರನ್ನು ಮುಖ್ಯಮಂತ್ರಿ ಮಾಡಬೇಕೆಂದು ಇದ್ರೋ ಅವರ ಮೇಲೆ ಹಲವು ಪ್ರಕರಣಗಳು ಇದಾವೆ. ಅದೆಲ್ಲ ಅವರಿಗೆ ಗೊತ್ತಿಲ್ವಾ ಎಂದು ಪ್ರಶ್ನಿಸಿದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English