ಸುಳ್ಯ: ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಐಸಿಯುನಲ್ಲಿದೆ. ಅಭಿವೃದ್ಧಿ ಕಾರ್ಯ ಸಂಪೂರ್ಣ ಕುಂಠಿತಗೊಂಡಿದೆ. ಮೂರು ತಿಂಗಳ ಒಳಗೆ ರಾಜ್ಯದ ಸಮ್ಮಿಶ್ರ ಸರ್ಕಾರ ಪತನವಾಗಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.
ಸುಳ್ಯದ ಬಿಜೆಪಿ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು. ಕುಮಾರಸ್ವಾಮಿ ಮತ್ತು ಪರಮೇಶ್ವರ್ ಅವರದ್ದು ಗುರು-ಹಿರಿಯರ ಸಮ್ಮುಖದಲ್ಲಿ ಆದ ಮದುವೆ. ಈಗ ಅವರೊಳಗೆ ಒಳ ಜಗಳ ಆರಂಭವಾಗಿದೆ. ಜಗಳ ವಿಚ್ಛೇದನ ಕೊಡುವ ಹಂತಕ್ಕೆ ಬಂದು ತಲುಪಿದೆ. ಕುಮಾರಸ್ವಾಮಿಯವರು ವಿಚ್ಛೇದನಕ್ಕೆ ಅರ್ಜಿ ಕೂಡ ಹಾಕಿದ್ದಾರೆ ಎಂದು ವ್ಯಂಗ್ಯವಾಡಿದರು.
ರೈತರ ಸಾಲ ಮನ್ನಾ ಮಾಡಲು ಮುಖ್ಯಮಂತ್ರಿಗಳು ಮೀನಾಮೇಷ ಎಣಿಸುತ್ತಿದ್ದಾರೆ. ಯಾವುದೇ ಅಭಿವೃದ್ಧಿ ಯೋಜನೆಗಳನ್ನು ಮಾಡುತ್ತಿಲ್ಲ. ಜಿಲ್ಲೆಯಲ್ಲಿ ಮಳೆಯ ಪ್ರಮಾಣ ವಿಪರೀತವಾಗಿದ್ದು, ಕೊಚ್ಚಿ ಹೋಗುವ ಹಂತದಲ್ಲಿದೆ. ಆದರೆ ಸರ್ಕಾರ ಜಿಲ್ಲೆಯ ಕಡೆ ಮುಖ ಮಾಡದೇ ಕಣ್ಣುಮುಚ್ಚಿ ಕುಳಿತಿದೆ. ಇಲ್ಲಿನ ಜಲ್ವಂತ ಸಮಸ್ಯೆಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲ. ಸರ್ಕಾರ ಅನುದಾನ ಬಿಡುಗಡೆ ಮಾಡದೇ ಇರುವುದರಿಂದ ಅಧಿಕಾರಿಗಳು ಕೆಲಸ ಮಾಡಲು ಭಯ ಪಡುತ್ತಿದ್ದಾರೆ. ವರ್ಗಾವಣೆ, ಬಡ್ತಿ ಜತೆಗೆ ಕಮಿಷನ್ ತೆಗೆದುಕೊಳ್ಳುವುದರಲ್ಲೇ ಸರ್ಕಾರ ಕಾಲ ಕಳೆಯುತ್ತಿದೆ ಎಂದು ದೂರಿದರು.
Click this button or press Ctrl+G to toggle between Kannada and English