ಮಂಗಳೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಯೋಗ ಕಾರ್ಯಕ್ರಮ ನಡೆಯಿತು.
ಮಂಗಳಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಯೋಗ ಕಾರ್ಯಕ್ರಮದಲ್ಲಿ ವಸತಿ ಸಚಿವ ಯು.ಟಿ. ಖಾದರ್, ಸಂಸದ ನಳಿನ್ ಕುಮಾರ್ ಕಟೀಲ್ ಭಾಗಿಯಾದರು.
ಧರ್ಮಸ್ಥಳದಲ್ಲೂ ಯೋಗ ದಿನ ಪ್ರಯುಕ್ತ ಬೃಹತ್ ಕಾರ್ಯಕ್ರಮ ನಡೆಯಿತು. ಡಾ. ವೀರೇಂದ್ರ ಹೆಗ್ಗಡೆ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಯಾದರು.
Click this button or press Ctrl+G to toggle between Kannada and English