ಧರ್ಮಸ್ಥಳ : ಧರ್ಮಸ್ಥಳ ಗ್ರಾಮದಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಗೆ ದೂರು ನೀಡಿರುವ ಅನಾಮಧೇಯ ವ್ಯಕ್ತಿಯ ದೂರಿನಲ್ಲಿರುವಂತೆ ಪೊಲೀಸ್ ಠಾಣೆಗೆ ಯಾವುದೇ ಮೃತ ವ್ಯಕ್ತಿಯ ಕಳೇಬರ ನೀಡಿಲ್ಲ ವಕೀಲರು ದೂರು ಸಲ್ಲಿಸುವ ವೇಳೆ ಕಳೇಬರ ವನ್ನು ಮುಂದಿನ ಹಂತದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವುದಾಗಿ ಲಿಖಿತವಾಗಿ ತಿಳಿಸಿರುತ್ತಾರೆ ಎಂದಿದ್ದಾರೆ.
ಪತ್ರಿಕಾಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಪೊಲೀಸರು ಧರ್ಮಸ್ಥಳ ಪೊಲೀಸ್ ಠಾಣಾ ಅ.ಕ್ರ: 39/2025 ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ರಿ ದೂರುದಾರರ ವಕೀಲರು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯನ್ನು ನೋಡಿ, ಹಲವರು ದೂರಿನಲ್ಲಿ ಉಲ್ಲೇಖಿಸಿರುವ ಕಳೆಬರಹದ ಕುರಿತು ವಿಚಾರಿಸಿರುತ್ತಾರೆ.
ಈ ವಿಷಯದ ಬಗ್ಗೆ ಸ್ಪಷ್ಟನೆ ಏನೆಂದರೆ, ಸದ್ರಿ ದೂರಿಗೆ ಸಂಬಂಧಿಸಿದಂತೆ, ಈವರೆಗೆ ಪೊಲೀಸ್ ಠಾಣೆಗೆ ತಲೆಬುರುಡೆ ಹಾಗೂ ಅವಶೇಷದ ಕೆಲಭಾಗಗಳಿರುವ ಎರಡು ಫೋಟೋಗಳ ಕಲರ್ ಝೆರಾಕ್ಸ್ ಪ್ರತಿಯನ್ನು ಮಾತ್ರ ಸಲ್ಲಿಸಿರುತ್ತಾರೆ. ಇದನ್ನು ಹೊರತುಪಡಿಸಿದಂತೆ ಯಾವುದೇ ಕಳೇಬರ ವನ್ನು ಈವರೆಗೆ ಪೊಲೀಸ್ ಠಾಣೆಗೆ ನೀಡಿರುವುದಿಲ್ಲ. ದೂರುದಾರರ ಪರವಾಗಿ ವಕೀಲರು ದೂರು ಸಲ್ಲಿಸುವ ವೇಳೆ ಕಳೇಬರ ವನ್ನು ಮುಂದಿನ ಹಂತದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವುದಾಗಿ ಲಿಖಿತವಾಗಿ ತಿಳಿಸಿರುತ್ತಾರೆ ಎಂದಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಸುದ್ದಿಗಳು, ಟಾಪ್ ಸುದ್ದಿ, ಪ್ರಾದೇಶಿಕ ಸುದ್ದಿಗಳು









