ಬೆಂಗಳೂರು: ಹಿಂದಿನ ಸರ್ಕಾರದ ಅವಧಿಯಲ್ಲಿ ಕೈಗೊಂಡಿರುವ ಆರ್ಥಿಕ ಮತ್ತು ಸಾಮಾಜಿಕ ಗಣತಿಗೆ ಅಧಿಕಾರಿಗಳು ಹೆಚ್ಚುವರಿ ಹಣ ಕೇಳುತ್ತಿದ್ದಾರೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗ ಶೆಟ್ಟಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ತಮ್ಮ ಕಚೇರಿ ಪ್ರವೇಶಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಆರ್ಥಿಕ ಮತ್ತು ಸಾಮಾಜಿಕ ಗಣತಿಗೆ ಈಗಾಗಲೇ 150 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಆ ಹಣ ಸಾಲದು ಎಂದು ಹೆಚ್ಚುವರಿಯಾಗಿ ಇನ್ನೂ ಹಣ ಬೇಕು ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ಮನವಿ ಸಲ್ಲಿಸಿದ್ದಾರೆ. ಕೆಲವೇ ದಿನಗಳಲ್ಲಿ ವರದಿ ಮಂಡಿಸಲು ಅವರು ಒಪ್ಪಿದ್ದಾರೆ. ಅವರು ವರದಿ ಮಂಡಿಸಲಿ ಬಳಿಕ ಅದರಲ್ಲಿರುವ ತಪ್ಪುಗಳನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದರು.
ರಾಜ್ಯದ ಕೆಲವು ಹಿಂದುಳಿದ ಜಾತಿಗಳಲ್ಲಿ ಇನ್ನೂ ಮೌಢ್ಯಾಚರಣೆ ಇದೆ. ಮೌಢ್ಯಾಚರಣೆ ತೊಡೆದು ಹಾಕಲು ಆದ್ಯತೆ ನೀಡುತ್ತೇವೆ ಎಂದು ಇದೇ ವೇಳೆ ತಿಳಿಸಿದರು.
ಇದಕ್ಕೂ ಮುನ್ನ ಸಚಿವ ಪುಟ್ಟರಂಗ ಶೆಟ್ಟಿ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಪೂಜೆ ಸಲ್ಲಿಸಿದರು. ವಿಧಾನದೌಧದ ಮೂರನೇ ಮಹಡಿಯಲ್ಲಿ ಇರುವ 339 ಸಂಖ್ಯೆ ಕಚೇರಿಯಲ್ಲಿ ಪೂಜೆ ಸಲ್ಲಿಸಿ ಹಿಂದುಳಿದ ವರ್ಗಗಳ ಇಲಾಖೆಯ ಚಾರ್ಜ್ ತೆಗೆದುಕೊಂಡರು.
Click this button or press Ctrl+G to toggle between Kannada and English