- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಫಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿದ್ದ ತಡೆಗೋಡೆ ಕುಸಿತ.. ದೊಡ್ಡಿಕಟ್ಟ ಪ್ರದೇಶದಲ್ಲಿ ಅವಾಂತರ ಸೃಷ್ಟಿ!

mangaluru [1]ಮಂಗಳೂರು: ಇಲ್ಲಿನ ಹೊರವಲಯದಲ್ಲಿ ಫಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿದ್ದ ತಡೆಗೋಡೆ ಕುಸಿದ ಪರಿಣಾಮ ಬಜ್ಪೆ ಬಳಿಯ ದೊಡ್ಡಿಕಟ್ಟ ಪ್ರದೇಶಕ್ಕೆ ನೀರು ನುಗ್ಗಿ ದೊಡ್ಡಿಕಟ್ಟ ಪ್ರದೇಶ ಸೃಷ್ಠಿಯಾಗಿದೆ. ಅಂಬ್ಲಮೊಗರು ಮದಕ ಜಂಕ್ಷನ್ ಬಳಿ ಗುಡ್ಡ ಕುಸಿತ ಇಂದು ಶುಕ್ರವಾರ ಬೆಳ್ಳಂಬೆಳಿಗ್ಗೆ ಈ ಘಟನೆ ನಡೆದಿದೆ.

ಮಂಗಳೂರು ಹೊರವಲಯದ ಎಸ್ಇ ಝಡ್ ವಲಯಕ್ಕೆ ನೀರು ಹರಿಯುವ ನಾಲೆಗೆ ತಡೆಗೋಡೆ ನಿರ್ಮಿಸಲಾಗಿತ್ತು. ಆದರೆ ಇಂದು ಮುಂಜಾನೆ ತೆಡೆಗೋಡೆ ಕುಸಿದಿದ್ದು, ನದಿ ನೀರು ಜನವಸತಿ ಪ್ರದೇಶಕ್ಕೆ ನುಗ್ಗಿದೆ.

mangaluru-2 [2]ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಈ ತಡೆಗೊಡೆ ಕುಸಿದಿದೆ. ತಗ್ಗು ಪ್ರದೇಶಗಳಿಗೆ ಸಾಕಷ್ಟು, ನೀರು ನುಗಿದ್ದು ತಡೆಗೊಡೆ ಬಳಿಯ ಇರುವ ದೊಡ್ಡಿಕಟ್ಟ ಪ್ರದೇಶ ಸಂಪೂರ್ಣ ಜಲಾವೃತವಾಗಿದೆ.

ದೊಡ್ಡಿಕಟ್ಟ ಸಮೀಪದ ದೇವಸ್ಥಾನ, ಪರಿಸರದ ಮನೆಗಳಿಗೆ ನೀರು ನುಗ್ಗಿರುವುದರಿಂದ ಅಪಾರ ಪ್ರಮಾಣದಲ್ಲಿ ಹಾನಿಯುಂಟಾಗಿದೆ. ಈ ಸ್ಥಳದಲ್ಲಿಯೇ ಇರುವ ಸಾಫ್ಟ್ ವೇರ್ ಕಂಪನಿಯ ಕಚೇರಿಗೂ ನೀರು ನುಗ್ಗಿದೆ.

ಈಗ ನೀರಿನ ಪ್ರಮಾಣ ಇಳಿಮುಖವಾಗಿದ್ದು, ಸ್ಥಳೀಯ ಜನ ಪ್ರತಿನಿಧಿಗಳು ಸೇರಿದಂತೆ ಸಂಸದ ನಳಿನ್ ಕುಮಾರ್ ಕಟೀಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.