ಮಂಗಳೂರು: ಸುಮಾರು 45 ವರ್ಷಗಳಷ್ಟು ಹಳೆಯದಾದ ಮೂಲರಪಟ್ಣದ ಸೇತುವೆ ಕಳೆದ ಮೂರುನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ನೀರಿನ ಒಳ ಹರಿವು ಹೆಚ್ಚಾದುದರಿಂದ ಸೋಮವಾರ ಸಂಜೆ 5.30ರ ಸುಮಾರಿಗೆ ಕುಸಿದಿದೆ.
ಬಿ.ಸಿ. ರೋಡ್ ಮತ್ತು ಕುಪ್ಪೆಪದವು ಸಂಪರ್ಕಿಸುವ ರಸ್ತೆಯ ನಡುವೆ ಫಲ್ಗುಣಿ ನದಿಗೆ ಅಡ್ಡಲಾಗಿ ಸೇತುವೆ ಕಟ್ಟಲಾಗಿದೆ. ಇದೇ ವೇಳೆಗೆ ಸೀಗಲ್ ಎಂಬ ಬಸ್ಸು ಮೂಲರಪಟ್ಣ ದಿಂದ ಸುರತ್ಕಲ್ ಗೆ ಹೋಗುತಿತ್ತು. ಕೇವಲ ಒಂದೆರಡು ನಿಮಿಷಗಳ ವ್ಯತ್ಯಾಸದಲ್ಲಿ ಈ ಘಟನೆ ಸಂಭವಿಸಿದೆ .
ಫಲ್ಗುಣಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಯ ಬೃಹತ್ ಟ್ರಕ್ಕುಗಳ ಸಂಚಾರದಿಂದ ಸೇತುವೆ ಶಿಥಿಲಗೊಂಡಿದೆ ಎಂದು ಹೇಳಲಾಗುತ್ತಿದೆ.
ಈ ಸೇತುವೆಯ ಮೂಲಕ ದಿನನಿತ್ಯ ಹಲವು ವಾಹನಗಳು ಸಂಚರಿಸುತ್ತಿತ್ತು. ಏಳೆಂಟು ಬಸ್ಸ್ ಗಳ ಓಡಾಟವು ಇದೆ. ಸೇತುವೆ ಶಿಥಿಲಗೊಂಡಿದ್ದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಈ ಬಗ್ಗೆ ಹಲವು ಬಾರಿ ಮನವಿ ಸಲ್ಲಿಸಿದ್ದರು. ಆದರೆ ಅಧಿಕಾರಿಗಳು ಈ ಬಗ್ಗೆ ದಿವ್ಯ ನಿರ್ಲಕ್ಷ್ಯ ತಾಳಿದ್ದರು ಎನ್ನುವ ಆರೋಪ ಸಾರ್ವಜನಿಕರಿಂದ ವ್ಯಕ್ತವಾಗಿದೆ.
Click this button or press Ctrl+G to toggle between Kannada and English