ಸ್ಮಾರ್ಟ್ ಸಿಟಿ ಯೋಜನೆಯನ್ನು ದೇಶಕ್ಕೆ ಮಾದರಿಯಾಗುವಂತೆ ತಯಾರು ಮಾಡಲಾಗುತ್ತಿದೆ : ಸಚಿವ ಖಾದರ್

9:36 PM, Monday, June 25th, 2018
Share
1 Star2 Stars3 Stars4 Stars5 Stars
(No Ratings Yet)
Loading...

UT Khader ಮಂಗಳೂರು : ಸ್ಮಾರ್ಟ್ ಸಿಟಿ ಯೋಜನೆಯನ್ನು ಪರಿಪೂರ್ಣವಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಯೋಜನೆಯ ಆಡಳಿತ ನಿರ್ದೇಶಕರಿ(ಎಂ.ಡಿ.)ಗೆ ಸಂಪೂರ್ಣ ಜವಾಬ್ದಾರಿ ವಹಿಸಲಾಗುತ್ತಿದೆ. ದೇಶಕ್ಕೆ ಮಾದರಿಯಾಗುವ ನಿಟ್ಟಿನಲ್ಲಿ ತಯಾರು ಮಾಡಲಾಗುತ್ತಿದೆ. ಇದಕ್ಕಾಗಿ ಜನರೂ ಸ್ಮಾರ್ಟ್ ಆಗಬೇಕಾಗಿದೆ. ಜನರ ಸಹಭಾಗಿತ್ವವೂ ಅಗತ್ಯವಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯನ್ನು ಯೋಜನೆಗೆ ಸಂಬಂಧಿಸಿದಂತೆ ಆಡಳಿತ ನಿರ್ದೇಶಕರು ಪ್ರತೀ 15 ದಿನಗಳಿಗೊಮ್ಮೆ ಪರಿಶೀಲನಾ ಸಭೆ ನಡೆಸಲು ಸೂಚಿಸಲಾಗಿದೆ ಎಂದು ಸಚಿವ ಖಾದರ್ ಹೇಳಿದರು.

ನಗರದ ಮಲ್ಲಿಕಟ್ಟೆಯಲ್ಲಿರುವ ಕೆಯುಐಡಿಎಫ್‌ಸಿ ಕಚೇರಿಯಲ್ಲಿಂದು ಜನಪ್ರತಿನಿಧಿಗಳು ಹಾಗೂ ಉನ್ನತ ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಸ್ಮಾರ್ಟ್ ಸಿಟಿ ಯೋಜನೆಗೆ ಸಂಬಂಧಿಸಿ  ಕೆಲಸ ಸಮರ್ಪಕವಾಗಿ ನಡೆಸಲು ಎಸ್‌ಪಿವಿ ಎಂಡಿಗೆ ಅಧಿಕಾರ ನೀಡಲಾಗುವುದು. ತಿಂಗಳಿಗೊಮ್ಮೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆಡಳಿತ ಮಂಡಳಿ ಸಭೆ ನಡೆಸಬೇಕು ಎಂದು ಸಚಿವ ಖಾದರ್ ಹೇಳಿದರು.

ಕಂದಾಯ ಇಲಾಖೆಗೆ ಸಂಬಂಧಿಸಿ ಜನರಿಗೆ ಆಗುತ್ತಿರುವ ಸಮಸ್ಯೆಯನ್ನು ಇತ್ಯರ್ಥಗೊಳಿಸುವ ಸಲುವಾಗಿ ಸಂಪೂರ್ಣವಾಗಿ ಚರ್ಚಿಸಿ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.

 

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್‌ನ ಸದಸ್ಯ ಐವನ್ ಡಿಸೋಜ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಮೇಯರ್ ಭಾಸ್ಕರ ಮೊಯ್ಲಿ, ಮನಪಾ ಸದಸ್ಯರಾದ ಪ್ರೇಮಾನಂದ ಶೆಟ್ಟಿ, ಶಶಿಧರ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು. ಸುದ್ದಿಗೋಷ್ಠಿಗೆ ಶಾಸಕರು, ಮೇಯರ್ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪೊನ್ನುರಾಜ್, ಕೆಯುಐಡಿಎಫ್‌ಸಿ ವ್ಯವಸ್ಥಾಪಕ ನಿರ್ದೇಶಕ ಇಬ್ರಾಹೀಂ ಸೇರಿದಂತೆ ಇತರ ಅಧಿಕಾರಿಗಳ ಜತೆ ಸಭೆ ನಡೆಸಿದರು.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English