ಬೆಂಗಳೂರು: ಯಡಿಯೂರಪ್ಪ ನಿವಾಸದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದೆ, ಇದರ ಬೆನ್ನಲ್ಲೇ ಮಾಜಿ ಸಚಿವ ಉಮೇಶ್ ಕತ್ತಿಯವರು ಅವಕಾಶ ಸಿಕ್ಕರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡುತ್ತೇವೆ ಎನ್ನುವ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಮಾಜಿ ಸಚಿವ ಉಮೇಶ್ ಕತ್ತಿ ಮತ್ತು ಮುರುಗೇಶ್ ನಿರಾಣಿ ಬಿಜೆಪಿ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಡಾಲರ್ಸ್ ಕಾಲೊನಿ ನಿವಾಸಕ್ಕೆ ತೆರಳಿದ್ದರು. ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದಾರೆ.
ಬಿಎಸ್‌ವೈ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮದು ರಾಜಕೀಯ ಪಕ್ಷ, ನಮಗೆ ಅವಕಾಶ ಸಿಕ್ಕರೆ ಖಂಡಿತವಾಗಿಯೂ ಬಳಸಿಕೊಳ್ಳುತ್ತೇವೆ,ಸರ್ಕಾರ ರಚನೆ ಮಾಡುತ್ತೇವೆ ಎಂದರು.
2019 ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಚರ್ಚ ನಡೆಸಿದ್ದೇವೆ, ಕಾರ್ಯಕಾರಿಣಿ ಸಭೆ ಒಳ್ಳೆಯ ರೀತಿ ನಡೆಯಬೇಕು ಎಂದು ಕೂಡ ಚರ್ಚೆ ನಡೆಸಿದ್ದೇವೆ ಎಂದರು. ಮಾಜಿ ಸಚಿವ ಮುರುಗೇಶ್ ನಿರಾಣಿ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ, ಕತ್ತಿ ಹೇಳಿಕೆಗೆ ಸಮ್ಮತಿಯ ಮುದ್ರೆ ಒತ್ತಿ ನಿರ್ಗಮಿಸಿದರು.
Click this button or press Ctrl+G to toggle between Kannada and English