ಗುರುಪುರ ಸೇತುವೆ ಬಂದ್, ಪಿಡಬ್ಲ್ಯೂಡಿ ಅಧಿಕಾರಿಗಳಿಂದ ಪರಿಶೀಲನೆ

10:04 AM, Thursday, June 28th, 2018
Share
1 Star2 Stars3 Stars4 Stars5 Stars
(No Ratings Yet)
Loading...

mangaluruಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಮುಂಗಾರು ಮಳೆಗೆ ಬಂಟ್ವಾಳ ಮತ್ತು ಮಂಗಳೂರು ತಾಲೂಕುಗಳ ಗಡಿಭಾಗ ಮುಲ್ಲರಪಟ್ನ ಎಂಬಲ್ಲಿ ಈಗಾಗಲೇ ಸೇತುವೆ ಕುಸಿದು ಬಿದ್ದಿದ್ದು, ಮತ್ತೊಂದು ಸೇತುವೆ ಇದೇ ಪರಿಸ್ಥಿತಿಯಲ್ಲಿದೆ. ಸಂಪೂರ್ಣ ಶಿಥಿಲಗೊಂಡಿರುವ ಈ ಸೇತುವೆ ಯಾವಾಗ ಕುಸಿದು ಬೀಳಲಿದೆ ಎಂಬ ಆತಂಕದಲ್ಲಿ ಸಾರ್ವಜನಿಕರು, ವಾಹನ ಸವಾರರು ದಿನದೂಡುತ್ತಿದ್ದಾರೆ.

ಇದರ ಬೆನ್ನಲ್ಲೆ ನಿನ್ನೆ ಗುರುಪುರ ಸೇತುವೆಯನ್ನು ರಾಷ್ಟ್ರೀಯ ಹೆದ್ದಾರಿ ಮತ್ತು ಪಿಡಬ್ಲ್ಯೂಡಿ ಅಧಿಕಾರಿಗಳು ಪರಿಶೀಲನೆ ನಡೆಸಿದರು.

ಗುರುಪುರ ಸೇತುವೆ ತುರ್ತು ನಿರ್ವಹಣೆ ಕಾಮಗಾರಿ ಪ್ರಯುಕ್ತ ಇಂದು ಬೆಳಿಗ್ಗೆ 5 ಗಂಟೆಯಿಂದ 10 ಗಂಟೆಯವರೆಗೆ ಸೇತುವೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳು ಈ ಸಮಯದಲ್ಲಿ ವಾಮಂಜೂರು- ಪಚ್ಚನಾಡಿ-ಬೋಂದೆಲ್-ಕಾವೂರು-ಬಜಪೆ- ಕೈಕಂಬ ಮಾರ್ಗದಲ್ಲಿ ಸಂಚರಿಸಬಹುದು. ಕೈಕಂಬದಿಂದ ಮಂಗಳೂರು ಕಡೆಗೆ ಬರುವ ವಾಹನಗಳು ಇದೇ ಮಾರ್ಗದಲ್ಲಿ ಸಂಚರಿಸಬಹುದಾಗಿದೆ

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English