ಮಲೆನಾಡಿನಲ್ಲಿ ಭಾರಿ ಮಳೆ…ಶಾಲಾ-ಕಾಲೇಜುಗಳಿಗೆ ರಜೆ!

1:09 PM, Thursday, June 28th, 2018
Share
1 Star2 Stars3 Stars4 Stars5 Stars
(No Ratings Yet)
Loading...

rainingತೀರ್ಥಹಳ್ಳಿ: ಮಲೆನಾಡಿನಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ಆರ್ಭಟ ಜೋರಾಗಿದ್ದು, ಮುಂದಿನ ದಿನಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.

ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತುಂಗಾ ನದಿ ಸೇರಿದಂತೆ ಎಲ್ಲಾ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ನೀರಿ‌ನ ಪ್ರಮಾಣ ಏರಿಕೆಯಾಗುವ ಸಾಧ್ಯತೆ ಇದೆ. ತೀರ್ಥಹಳ್ಳಿ, ಶೃಂಗೇರಿ, ಕೊಪ್ಪ, ಆಗುಂಬೆ ಸೇರಿದಂತೆ ತುಂಗಾ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ.

ಭಾರಿ ಮಳೆಗೆ ಹಲವೆಡೆ ಹಾನಿಯಾಗಿದೆ. ಕೆಲವೆಡೆ ಗುಡ್ಡಗಳು ಕುಸಿದಿರುವ ಬಗ್ಗೆ ವರದಿಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಇಂದು ತಾಲೂಕಿನ ಎಲ್ಲಾ ಶಾಲೆ ಕಾಲೇಜುಗಳಿಗೆ ತಹಶೀಲ್ದಾರ್ ಆನಂದಪ್ಪ ನಾಯಕ್ ರಜೆ ಘೋಷಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English