ಮುಂಬೈ: ಪರಿಕ್ಷಾರ್ಥ ಪ್ರಯಾಣಿಸುತ್ತಿದ್ದ ಸಣ್ಣ ವಿಮಾನವೊಂದು ಮುಂಬೈನ ಜನನಿಬಿಡ ಪ್ರದೇಶದ ನಿರ್ಮಾಣ ಹಂತದ ಬಿಲ್ಡಿಂಗ್ ಬಳಿ ಅಪ್ಪಳಿಸಿ ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಐವರು ಅಧಿಕಾರಿಗಳು ಮೃತಪಟ್ಟಿದ್ದಾರೆ.
ಜುಹು ಏರ್ ಪೋರ್ಟ್ ನಿಂದ ಟೇಕ್ ಆಫ್ ಆಗಿದ್ದ ವಿಮಾನ ಘಾಟ್ಕೋಪರ್ದ ಸರ್ವೋದಯ ನಗರದ ಬಳಿ ಲ್ಯಾಂಡಿಂಗ್ ಆಗುವ ವೇಳೆ ನೆಲಕ್ಕೆ ಅಪ್ಪಳಿಸಿದೆ. ಮಧ್ಯಾಹ್ನ 1.15ಕ್ಕೆ ಅಪಘಾತ ಸಂಭವಿಸಿದ್ದು, ನಾಲ್ವರ ಮೃತದೇಹಗಳನ್ನು ಹೀಗಾಗಲೇ ಹೊರ ತರಲಾಗಿದೆ.
ಬೀಚ್ಕ್ರಾಫ್ಟ್ ಕಿಂಗ್ ಏರ್ C90 ಟರ್ಬೊಪ್ರೊಪ್ ನ ವಿಮಾನ ಅಪಘಾತಕ್ಕೀಡಾಗಿದೆ ಎಂದು ಗುರುತಿಸಲಾಗಿದೆ. ಈ ನಡುವೆ ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಹಲವಾರು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಹಾಗೂ ರಕ್ಷಣಾ ಕಾರ್ಯಾಚರಣೆ ಕೈಗೊಂಡವು.
Click this button or press Ctrl+G to toggle between Kannada and English