ವಿಕಲಚೇತನ ಮಕ್ಕಳ ಫಿಸಿಯೋಥೆರಪಿ ಕೇಂದ್ರ ಉದ್ಘಾಟನೆ..!

10:09 AM, Friday, June 29th, 2018
Share
1 Star2 Stars3 Stars4 Stars5 Stars
(No Ratings Yet)
Loading...

udupiಉಡುಪಿ: ನವ್ಯಚೇತನ ಶಿಕ್ಷಣ ಸಂಶೋಧನೆ ಮತ್ತು ಕಲ್ಯಾಣ ಟ್ರಸ್ಟ್ ಉಡುಪಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ಆಶ್ರಯದಲ್ಲಿ ವಿಶೇಷ ಅಗತ್ಯತೆ ಇರುವ ವಿಕಲಚೇತನ ಮಕ್ಕಳ ಫಿಸಿಯೋಥೆರಪಿ ಕೇಂದ್ರವನ್ನು ಗುರುವಾರ ಉಡುಪಿ ಸಿಟಿ ಬಸ್ ನಿಲ್ದಾಣ ಬಳಿ ಇರುವ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟಿಸಲಾಯಿತು.

ಕೇಂದ್ರವನ್ನು ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಈ ಕೇಂದ್ರದಿಂದ ವಿಕಲಚೇತನ ಮಕ್ಕಳ ಪೋಷಕರಿಗೆ ಹೆಚ್ಚಿನ ಅನುಕೂಲ ಸಿಗುವಂತಾಗಲಿ ಎಂದು ಹಾರೈಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಉಡುಪಿ ಶಾಸಕ ಕೆ.ರಘುಪತಿ ಭಟ್ ಮಾತನಾಡಿ, ಸರ್ವಶಿಕ್ಷಣ ಅಭಿಯಾನ ಯೋಜನೆಯ ಭಾಗವಾಗಿರುವ ವಿಶೇಷ ಅಗತ್ಯವಿರುವ ವಿಕಲಚೇತನ ಮಕ್ಕಳ ಫಿಸಿಯೋಥೆರಪಿ ಕೇಂದ್ರ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡುವ ಪ್ರಯತ್ನದ ಒಂದು ಭಾಗವಾಗಿದೆ ಎಂದರು.

ಡಾ.ಶಿವಾನಂದ ನಾಯಕ್ ನೇತೃತ್ವದ ನವ್ಯಚೇತನ ಶಿಕ್ಷಣ, ಸಂಶೋಧನೆ ಮತ್ತು ಕಲ್ಯಾಣ ಟ್ರಸ್ಟ್ ಇದರ ಜವಾಬ್ದಾರಿಯನ್ನು ವಹಿಸಿಕೊಂಡಿದೆ. ಈ ಕೇಂದ್ರವನ್ನು ವಿಶಾಲ ಅವಕಾಶವಿರುವ ಬೋರ್ಡ್ ಹೈಸ್ಕೂಲ್ ಆವರಣಕ್ಕೆ ಸ್ಥಳಾಂತರಿಸಿ, ಅಲ್ಲಿ ನಗರಸಭೆಯ ಲಭ್ಯ ಅನುದಾನದ ಮೂಲಕ ಈ ಮಕ್ಕಳಿಗೆ ಅಗತ್ಯವಿರುವ ಎಲ್ಲಾ ಉಪಕರಣೆ, ಸಲಕರಣೆಗಳನ್ನು ಅಳವಡಿಸುವ ಪ್ರಯತ್ನ ನಡೆಸುವುದಾಗಿ ಭರವಸೆ ನೀಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶೇಷಶಯನ ಕೆ. ಮಾತನಾಡಿ, ಉಡುಪಿ ಜಿಲ್ಲೆಯ ಎಲ್ಲಾ ಐದು ವಲಯಗಳಲ್ಲಿ- ಉಡುಪಿ, ಬ್ರಹ್ಮಾವರ, ಕಾರ್ಕಳ, ಕುಂದಾಪುರ, ಹೆಮ್ಮಾಡಿ (ಬೈಂದೂರು)ಗಳಲ್ಲಿ ಈ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದರು.

ಉಡುಪಿ ತಾಲೂಕಿನಲ್ಲಿ ಒಟ್ಟು 248 ವಿಶೇಷ ಅಗತ್ಯವುಳ್ಳ ಮಕ್ಕಳನ್ನು ಗುರುತಿಸಲಾಗಿದ್ದು, ಇವರಲ್ಲಿ 35 ಮಕ್ಕಳಿಗೆ ಗೃಹಾಧಾರಿತ ಶಿಕ್ಷಣದ ಅಗತ್ಯವಿದೆ. ಇನ್ನು 38 ಮಕ್ಕಳನ್ನು ಫಿಸಿಯೋಥೆರಪಿಗೆ ಗುರುತಿಸಲಾಗಿದ್ದು, ಇಲ್ಲಿ 9 ಮಂದಿ ಮಕ್ಕಳು ಇದನ್ನು ಪಡೆಯುತಿದ್ದಾರೆ. ಪ್ರತಿ ವರ್ಷ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ವೈದ್ಯಕೀಯ ಶಿಬಿರ ನಡೆಸಿ ಇವರ ಅಗತ್ಯತೆಯನ್ನು ಅರಿತುಕೊಳ್ಳಲಾಗುತ್ತಿದೆ ಎಂದರು.

ನವ್ಯಚೇತನ ಶಿಕ್ಷಣ ಸಂಶೋಧನೆ ಮತ್ತು ಕಲ್ಯಾಣ ಟ್ರಸ್ಟ್‌ನ ಡಾ.ಶಿವಾನಂದ ನಾಯಕ್, ಡಾ.ವಿವೇಟಾ, ಡಾ.ರಾಜಶಂಕರ್, ಸರ್ವಶಿಕ್ಷಣ ಯೋಜನೆಯ ಸಹಾಯಕ ಯೋಜನಾ ಸಮನ್ವಯಾಧಿಕಾರಿ ಚಂದ್ರ ನಾಯಕ್ ಉಸ್ಥಿತರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಬಿ.ಲೋಕೇಶಪ್ಪಅತಿಥಿಗಳನ್ನು ಸ್ವಾಗತಿಸಿದರೆ, ಕೇಂದ್ರದ ಉಮಾ ಕಾರ್ಯಕ್ರಮ ನಿರ್ವಹಿಸಿರು. ಶಿವರಾಮ ಶೆಟ್ಟಿ ವಂದಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English