ಖರ್ಗೆ ವಿರುದ್ಧ ಬಿಜೆಪಿ ದಲಿತ ಯುವ ಮೋರ್ಚಾ ಕಾರ್ಯಕರ್ತರು ಆಕ್ರೋಶ!

5:29 PM, Friday, June 29th, 2018
Share
1 Star2 Stars3 Stars4 Stars5 Stars
(No Ratings Yet)
Loading...

dalith-yuva-morchaಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆದರೂ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಸಂಸದ ಮಲ್ಲಿಕಾರ್ಜುನ ಖರ್ಗೆ ಚಕಾರ ಎತ್ತದಿರುವುದು ಖಂಡನೀಯ ಎಂದು ಬಿಜೆಪಿ ದಲಿತ ಯುವ ಮೋರ್ಚಾ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಯುವಮೋರ್ಚಾ ಅಧ್ಯಕ್ಷ ರಾಘವೇಂದ್ರ ಚಿಂಚನಸೂರ ನೇತೃತ್ವದಲ್ಲಿ ಸರದಾರ ವಲ್ಲಭಬಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಖರ್ಗೆಯವರ ವಿರುದ್ಧ ಕಿಡಿಕಾರಿದರು.

ಜಿಲ್ಲೆಯಲ್ಲಿ ನಿರಂತರವಾಗಿ ದಲಿತರ ಮೇಲೆ ದೌರ್ಜನ್ಯಗಳು ನಡೆದಿವೆ. ಇಲ್ಲಿವರೆಗೆ ಆಗಿರುವ ದೌರ್ಜನ್ಯದ ಬಗ್ಗೆ ಇಲಾಖೆಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ಸ್ಪಷ್ಟನೆ ನೀಡಬೇಕು. ಸಚಿವರು ಮತ್ತು ಸಂಸದರು ಇನ್ನಾದರೂ ದಲಿತರ ಮೇಲೆ ದೌರ್ಜನ್ಯದ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕೆಂದು ಆಗ್ರಹಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English