ನವದೆಹಲಿ: ಪ್ರಸಕ್ತ ವರ್ಷ ದೇಶದಲ್ಲಿ ವಾಡಿಕೆಗೂ ಮೊದಲೇ ಮಾನ್ಸೂನ್ ಮಳೆ ಆಗಮನವಾಗಿದ್ದು, ಅನೇಕ ಕಡೆ ಈಗಾಗಲೇ ಅಬ್ಬರದ ಮಳೆ ಸುರಿಯುತ್ತಿದೆ. ಹೀಗಾಗಿ ಕಣಿವೆ ನಾಡು ಜಮ್ಮು-ಕಾಶ್ಮೀರದಲ್ಲಿ ಕಳೆದೆರಡು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಅಮರನಾಥ್ ಯಾತ್ರೆ ಸ್ಥಗಿತಗೊಳಿಸಲಾಗಿದೆ.
ಇದರ ಮಧ್ಯೆ ಕೆಟ್ಟ ಹವಾಮಾನ ಬೀಸುತ್ತಿರುವ ಕಾರಣ ಮುಂದಿನ ಎರಡು ದಿನಗಳ ಕಾಲ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಪ್ರಮುಖವಾಗಿ ಕರಾವಳಿ ಮತ್ತು ದಕ್ಷಿಣ ಕರ್ನಾಟಕ, ಮಹಾರಾಷ್ಟ್ರ, ಗೋವಾ, ಕೇರಳ, ಪೂರ್ವ ಮತ್ತು ಪಶ್ಚಿಮ ರಾಜಸ್ಥಾನ, ಅರುಣಾಚಲ ಪ್ರದೇಶ, ಆಸ್ಸೋಂ, ಮೇಘಾಲಯ, ಪಶ್ಚಿಮ ಬಂಗಾಳ, ಸಿಕ್ಕಿಂ, ಉತ್ತರಾಖಂಡ, ಹರಿಯಾಣ, ದೆಹಲಿ, ಹಿಮಾಚಲ ಪ್ರದೇಶ, ಜಮ್ಮು-ಕಾಶ್ಮೀರ,ತೆಲಂಗಾಣದಲ್ಲಿ ಭಾರಿ ಮಳೆಯಾಗುವ ಸೂಚನೆ ನೀಡಲಾಗಿದೆ.
ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಅಮರನಾಥ್ ಯಾತ್ರೆ ಸ್ಥಗಿತಗೊಳಿಸಿದ್ದು, ಕೆಲ ಪ್ರದೇಶಗಳಲ್ಲಿ ಭೂಕುಸಿತವಾಗಿರುವ ಮಾಹಿತಿ ಲಭ್ಯವಾಗಿದೆ.
Click this button or press Ctrl+G to toggle between Kannada and English