- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ತಮ್ಮ ಸೋಲಿಗೆ ಇವಿಎಂ ಕಾರಣ…ದ.ಕ. ಜಿಲ್ಲೆಯ ನಾಲ್ವರು ಕಾಂಗ್ರೆಸ್ ಅಭ್ಯರ್ಥಿಗಳು ದೂರು!

jr-lobo [1]ಮಂಗಳೂರು: ವಿಧಾನ ಸಭಾ ಚುನಾವಣೆಯಲ್ಲಿ ಅನಿರೀಕ್ಷಿತ ಹಿನ್ನಡೆಗೆ ಇವಿಎಂ ದುರ್ಬಳಕೆಯೇ ಕಾರಣ ಎಂದು ಪರಾಜಿತರಾದ ದ.ಕ. ಜಿಲ್ಲೆಯ ನಾಲ್ವರು ಕಾಂಗ್ರೆಸ್ ಅಭ್ಯರ್ಥಿಗಳು ದೂರು ನೀಡಿದ್ದು, ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿದೆ.

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಜೆ ಆರ್ ಲೋಬೊ, ತಮ್ಮ ಸೋಲಿಗೆ ಇವಿಎಂ ಕಾರಣ ಎಂದು ಆರೋಪಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ನಂತರ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಪರಾಜಿತ ಅಭ್ಯರ್ಥಿ ಎಂ ಕೆ ಸೋಮಶೇಖರ್, ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ಸೋತ ವಾಸು ಹಾಗೂ ಮಂಗಳೂರು ಉತ್ತರ ಕ್ಷೇತ್ರದ ಮೊಯ್ದಿನ್ ಬಾವ ನ್ಯಾಯಾಲಯಕ್ಕೆ ದೂರು ನೀಡಿದ್ದಾರೆ.

ಶಾಸಕರಾಗಿದ್ದ ಲೋಬೊ ಬಿಜೆಪಿಯ ವೇದವ್ಯಾಸ ಕಾಮತ್ ವಿರುದ್ಧ 16 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಸೋತಿದ್ದಾರೆ. ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಯ್ದಿನ್ ಬಾವ ಬಿಜೆಪಿಯ ಭರತ್ ಶೆಟ್ಟಿ ವಿರುದ್ಧ ಸೋಲನುಭವಿಸಿದ್ದಾರೆ.

ವಿಧಾನಸಭಾ ಚುನಾವಣಾ ಪೂರ್ವದಲ್ಲಿ ವಿವಿಧ ಏಜೆನ್ಸಿಗಳು ನಡೆಸಿದ್ದ ಸಮೀಕ್ಷೆಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಲಿದೆ ಎಂದು ಹೇಳಲಾಗಿತ್ತು. ಇನ್ನು ಕೆಲವು ಸಮೀಕ್ಷೆಗಳು ಕಾಂಗ್ರೆಸ್-ಬಿಜೆಪಿ ಸಮಬಲ ಸಾಧಿಸಲಿವೆ ಎಂದೂ ಹೇಳಿದ್ದವು. ಆದರೆ, ಚುನಾವಣಾ ಫಲಿತಾಂಶದಲ್ಲಿ ಬಿಜೆಪಿಯ ಕೆಲವು ಅಭ್ಯರ್ಥಿಗಳ ಗೆಲುವಿಗೆ ಆಶ್ಚರ್ಯ ವ್ಯಕ್ತಪಡಿಸಿ, ಇವಿಎಂ ದುರ್ಬಳಕೆಯಾಗಿದೆ ಎಂದು ಲೋಬೊ ಕೋರ್ಟ್ ಮೆಟ್ಟಿಲೇರಿದ್ದರು.

ಮಡಿಕೇರಿ ಜಿಲ್ಲೆಯ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಸಿ ಎಸ್ ಅರುಣ್ ಮಾಚಯ್ಯ ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿ, ಇವಿಎಂ ಹ್ಯಾಕ್ ಮಾಡಿರುವ ಬಗ್ಗೆ ಸಂಶಯವಿದೆ. ಈ ಸಂಬಂಧ ಹೈಕೋರ್ಟ್ ಮೊರೆಹೋಗಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ.