ಉಡುಪಿ: ಆಗುಂಬೆ ಘಾಟ್ ನಲ್ಲಿ ಭೂ ಕುಸಿತದಿಂದಾಗಿ ಕಳೆದೆರಡು ದಿನಗಳ ಹಿಂದೆ ಭಾರೀ ವಾಹನಗಳ ಸಂಚಾರ ನಿಷೇಧವಾಗಿತ್ತು. ಆದರೆ ಇಂದು ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದೆ.
ಆಗುಂಬೆ ಘಾಟ್ ನಲ್ಲಿ ತಾತ್ಕಾಲಿಕ ದುರಸ್ತಿ ಕಾರ್ಯ ನಡೆದಿದೆ. ಆದ್ದರಿಂದಾಗಿ ಬಸ್ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ಹೊರಡಿಸಿದ್ದಾರೆ.
ಉಡುಪಿಯಿಂದ ಶಿವಮೊಗ್ಗ- ಚಿಕ್ಕಮಗಳೂರು ಮಾರ್ಗವಾಗಿ ಬಸ್ ಓಡಾಟ ಶುರುವಾಗಲಿದೆ.
Click this button or press Ctrl+G to toggle between Kannada and English